ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಾಂತಿಕಾರಿಗಳ ಸ್ಮರಣೆ

Published 24 ಮಾರ್ಚ್ 2024, 7:46 IST
Last Updated 24 ಮಾರ್ಚ್ 2024, 7:46 IST
ಅಕ್ಷರ ಗಾತ್ರ

ತುಮಕೂರು: ಎಐಡಿಎಸ್‌ಒ ಸಂಘಟನೆಯಿಂದ ನಗರದ ವಿವಿಧೆಡೆ ಶನಿವಾರ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್‌ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ಅವರ ಹುತಾತ್ಮ ದಿನ ಆಚರಿಸಲಾಯಿತು.

ಬ್ರಿಟಿಷರ ದಬ್ಬಾಳಿಕೆ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ರಾಜಿ ರಹಿತವಾಗಿ ಹೋರಾಡಿ ನಗುನಗುತ್ತಾ ಗಲ್ಲಿಗೇರಿದ ಮಹಾನ್ ಕ್ರಾಂತಿಕಾರಿಗಳು. ‘ಜನತೆಗೆ ಸ್ವಾತಂತ್ರ್ಯ ತಂದು ಕೊಡುವ, ಮಾನವನಿಂದ ಮಾನವನ ಶೋಷಣೆ ಅಸಾಧ್ಯಗೊಳಿಸುವ ಕ್ರಾಂತಿಯ ಸಂದೇಶವನ್ನು ದೇಶದ ಮೂಲೆ ಮೂಲೆಗೂ ಒಯ್ಯುವಂತೆ ಭಗತ್‌ಸಿಂಗ್‌ ಹೇಳಿದ್ದರು’ ಎಂದು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸ್ಮರಿಸಿದರು.

ವಿದ್ಯಾರ್ಥಿಗಳು ಹಾಗೂ ಯುವ ಜನರು ಭಗತ್‌ ಸಿಂಗ್‌ ಹಾದಿಯಲ್ಲಿ ಸಾಗಬೇಕಿದೆ. ಬಂಡವಾಳಶಾಹಿ ಶೋಷಣೆಗೆ ಮುಕ್ತಾಯ ಹಾಡಲು ಸಮಾಜವಾದಿ ಕ್ರಾಂತಿ ಅನಿವಾರ್ಯ. ಭಗತ್‌ ಸಿಂಗ್‌ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ಹಸಿವು, ಬಡತನ, ನಿರುದ್ಯೋಗ ಇಲ್ಲದ ಸಮಾಜವಾದಿ ಭಾರತ ನಿರ್ಮಾಣ ಅವರ ಕನಸಾಗಿತ್ತು. ಅದನ್ನು ನನಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿಗಳು, ಯುವ ಜನರು ಮುನ್ನಡೆಯಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT