ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ಚಟುವಟಿಕೆ

Last Updated 17 ಮೇ 2022, 4:15 IST
ಅಕ್ಷರ ಗಾತ್ರ

ತಿಪಟೂರು: ತಾಲ್ಲೂಕಿನಾದ್ಯಂತ ಪ್ರಸಕ್ತ ಸಾಲಿನಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪ್ರಾರಂಭವಾಗಿವೆ.

ತಾಲ್ಲೂಕಿನ 349 ಶಾಲೆಗಳಲ್ಲಿನ ಒಟ್ಟು 28,211 ವಿದ್ಯಾರ್ಥಿಗಳ ಪೈಕಿ ಮೊದಲ ದಿನ 21,164 ವಿದ್ಯಾರ್ಥಿಗಳು ಹಾಜರಾಗಿದ್ದರು. ಖುಷಿಯಿಂದಲೇ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ವಿಭಿನ್ನವಾಗಿ ಸ್ವಾಗತ ಕೋರಿ ದರು. ಮೊದಲ ದಿನವನ್ನು ಸ್ವಚ್ಛತೆ, ಶಾಲೆಯ ಪರಿಚಯ, ಸ್ನೇಹಿತರ ಭೇಟಿ ಯಲ್ಲಿ ವಿದ್ಯಾರ್ಥಿಗಳು ಕಳೆದಿದ್ದಾರೆ.

ತಾಲ್ಲೂಕಿನ ನೊಣವಿನಕೆರೆಯ ಮುಖ್ಯಬೀದಿಗಳಲ್ಲಿ ಟ್ರ್ಯಾಕ್ಟರ್ ಮೂಲಕಕೆಪಿಎಸ್ ಮಕ್ಕಳಿಂದ ಶಾಲೆ ಪ್ರಾರಂಭದ ಜಾಗೃತಿ ಜಾಥಾ ಮೂಡಿಸ ಲಾಯಿತು. ಕೆಪಿಎಸ್ ಹೊನ್ನವಳ್ಳಿಯಲ್ಲಿ ಬ್ಯಾಂಡ್ ಬಾರಿಸಿಕೊಂಡು ಗ್ರಾಮದಲ್ಲಿ ಜಾಥಾ ನಡೆಸಿದರು.

ಯಗಚಿಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ನೀಡಿ ಸಿಹಿ ವಿತರಿಸಲಾಯಿತು. ನಗರದ ಬಾಲಕಿಯ ಸರ್ಕಾರಿ ಪ್ರೌಢಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದರು. ಮಧ್ಯಾಹ್ನದ ಬಿಸಿಯೂಟದ ವೇಳೆ ಸಿಹಿ ವಿತರಿಸಲಾಯಿತು.

‘ಮೊದಲ ದಿನವಾದ್ದರಿಂದ ವಿದ್ಯಾರ್ಥಿಗಳ ಸಂಖ್ಯೆ ಕೊಂಚ ಕಡಿಮೆ ಇದೆ. ಬಹುತೇಕ ಎಲ್ಲಾ ಶಾಲೆಗಳಲ್ಲಿಯೂ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಗಿದೆ. ಇನ್ನೆರೆಡು ದಿನಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಏರಿಕೆಯಾಗಲಿದೆ’ ಎಂದುಕ್ಷೇತ್ರ ಸಂಪನ್ಮೂಲ ವ್ಯಕ್ತಿಆರ್.ಸಿ. ದಕ್ಷಿಣಮೂರ್ತಿ ತಿಳಿಸಿದರು.

‘ಮೊದಲ ದಿನದಿಂದಲೇ ಮಕ್ಕಳಲ್ಲಿ ಕ್ರಿಯಾತ್ಮಕ ಚಟುವಟಿಕೆ ಪ್ರಾರಂಭಿಸಲು ಅಣಿಗೊಳಿಸಲಾಗಿದೆ. ಕಳೆದ ಎರಡು ವರ್ಷದಲ್ಲಿ ಹಿನ್ನೆಡೆಯಾದ ಜ್ಞಾನ ನೀಡಲು ಪ್ರಯತ್ನ ಮಾಡಲಾಗುವುದು’ ಎಂದು ಯಗಚಿಕಟ್ಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯಶಿಕ್ಷಕಿಉಮಾದೇವಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT