ಮಂಗಳವಾರ, ಸೆಪ್ಟೆಂಬರ್ 28, 2021
24 °C

ಗ್ರಾ.ಪಂ ಸದಸ್ಯರಿಂದ ಸೋಂಕಿತರ ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಜೆವರೆಗೂ ಯಾರೂ ಅಂತ್ಯಸಂಸ್ಕಾರ ಮಾಡದ ಕಾರಣ ಗ್ರಾಮ ಪಂಚಾಯಿತಿ ಸದಸ್ಯರೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ತಾಲ್ಲೂಕಿನ ನಾಗರಘಟ್ಟ ಗ್ರಾಮ ಪಂಚಾಯಿತಿಯ ಕೈದಾಳು ಗ್ರಾಮದಲ್ಲಿ ಸೋಂಕಿತ ಶ್ರೀನಿವಾಸ (45) ಗ್ರಾಮದ ಮುಂಭಾದಲ್ಲೇ ಶುಕ್ರವಾರ ಮೃತಪಟ್ಟಿದ್ದರು. ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿರಲಿಲ್ಲ. ಸಂಬಂಧಿಕರಿಗೆ ವಿಷಯ ತಿಳಿಸಿದರೂ ಅಂತ್ಯಸಂಸ್ಕಾರಕ್ಕೆ ಹಿಂದೇಟು ಹಾಕಿದ್ದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ್, ವೆಂಕಟೇಶ, ಭಾಗ್ಯಮ್ಮ ಅವರೇ ಪಿಪಿಇ ಕಿಟ್‍ ಧರಿಸಿ, ಸೋಂಕು ಹರಡದಂತೆ ಸ್ಯಾನಿಟೈಸ್‌ ಮಾಡಿ ಮೃತದೇಹವನ್ನು ಗ್ರಾಮದ ಹೊರ ಭಾಗದಲ್ಲಿ ಅಂತ್ಯಸಂಸ್ಕಾರ ಮಾಡಿದರು. ಗ್ರಾಮದ ಯುವಕರ ಸಹಕರಿಸಿದರು.

‘ಕೋವಿಡ್‌ ಲಕ್ಷಣಗಳು ಕಂಡುಬಂದ ತಕ್ಷಣ ಕುಟುಂಬಸ್ಥರು ಚಿಕಿತ್ಸೆ ಕೊಡಿಸಬೇಕು. ಗ್ರಾಮ ಪಂಚಾಯಿತಿ ಕಾರ್ಯಪಡೆಗೆ ಮಾಹಿತಿ ನೀಡಿದರೆ ಕೋವಿಡ್‌ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು