ಗುರುವಾರ , ಆಗಸ್ಟ್ 5, 2021
28 °C

ಸಿ.ಎಂ ಅಭ್ಯರ್ಥಿ ಹೈಕಮಾಂಡ್ ನಿರ್ಧಾರ: ಜಿ.ಪರಮೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ತುಮಕೂರು: ‘ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಶಾಸಕ ಜಿ.ಪರಮೇಶ್ವರ ಹೇಳಿದರು.

‘ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ’ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆಗೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ‘ಜಮೀರ್ ಅಹಮದ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಇದು ಪಕ್ಷದ ನಿರ್ಧಾರವಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ವಿಧಾನಸಭೆ ಚುನಾವಣೆ ಸಾಕಷ್ಟು ದೂರವಿದೆ. ಇನ್ನೂ ಚುನಾವಣೆಯೇ ನಡೆದಿಲ್ಲ. ಈಗಲೇ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೇಗೆ ನಿರ್ಧರಿಸಲಾಗುತ್ತದೆ. ಈಗ ಈ ವಿಚಾರದ ಚರ್ಚೆ ಅಪ್ರಸ್ತುತ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು