ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ವಿಚಾರಣೆ: ಪರಮೇಶ್ವರ

Published 27 ಮೇ 2024, 13:11 IST
Last Updated 27 ಮೇ 2024, 13:11 IST
ಅಕ್ಷರ ಗಾತ್ರ

ತುಮಕೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಮೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೊ ಮೂಲಕ ತಿಳಿಸಿದ್ದು, ತನಿಖಾ ತಂಡ ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಸ್‌ಐಟಿ ಬಳಿ ಇರುವ ಮಾಹಿತಿ, ದಾಖಲೆಗಳ ಆಧಾರದ ಮೇಲೆ ಪ್ರಜ್ವಲ್ ವಿಚಾರಣೆ ನಡೆಯಲಿದೆ. ಈಗಾಗಲೇ ಬಂಧನ ವಾರೆಂಟ್ ಜಾರಿಯಾಗಿರುವುದರಿಂದ ತನಿಖೆಯ ಭಾಗವಾಗಿ ಬಂಧನ ಮಾಡಬೇಕಾಗುತ್ತದೆ’ ಎಂದರು.

‘ಎಸ್‌ಐಟಿ ಎದುರು ಪ್ರಜ್ವಲ್ ಏನೆಲ್ಲ ಹೇಳಿಕೆ ಕೊಡುತ್ತಾರೊ ಕೊಡಲಿ. ತನಿಖಾ ತಂಡ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತದೆ. ರಾಜ್ಯದಲ್ಲಿ ಇಂತಹ ಘಟನೆ ಎಂದೂ ನಡೆದಿರಲಿಲ್ಲ. ಮೊದಲು ರಾಜ್ಯಕ್ಕೆ ಬಂದು ತನಿಖೆ ಎದುರಿಸಲಿ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT