ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಡಿಎಸ್– ಬಿಜೆಪಿ ಮೈತ್ರಿಯನ್ನು ಜನ ಒಪ್ಪುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ

Published : 23 ಸೆಪ್ಟೆಂಬರ್ 2023, 13:36 IST
Last Updated : 23 ಸೆಪ್ಟೆಂಬರ್ 2023, 13:36 IST
ಫಾಲೋ ಮಾಡಿ
Comments

ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್– ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ’ ಎಂದು ವಿಶ್ಲೇಷಿಸಿದರು.

ಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು? ಎಂದರು.

ಜೆಡಿಎಸ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT