ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಳಿಕೆ ರಜೆ ನಗದೀಕರಣ: ಸಿ.ಎಂ ಜತೆ ಚರ್ಚೆ

Last Updated 6 ಜನವರಿ 2021, 5:08 IST
ಅಕ್ಷರ ಗಾತ್ರ

ಕುಣಿಗಲ್: ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಿ ಹೊರಡಿಸಲಾಗಿರುವ ಆದೇಶ ಹಿಂಪಡೆಯಲು ಮುಖ್ಯಮಂತ್ರಿಯೊಂದಿಗೆ ಮಂಗಳವಾರ ಸಂಜೆ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಾಗಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಳ್ಳಲಾಗಿದ್ದ ಕ್ಯಾಲೆಂಡರ್ ಮತ್ತು ಡೈರಿ
ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಳಿಕೆ ರಜೆ ನಗದೀಕರಣ ಸೌಲಭ್ಯ ಮುಂದುವರೆಯುವುದು ನೌಕರರಲ್ಲಿ ಆತಂಕ ಬೇಡ. ಕೋವಿಡ್‌ ಸಂಕಷ್ಟ ಸ್ಥಿತಿಯಲ್ಲಿ ಸರ್ಕಾರಿ ನೌಕರರು ಕಳೆದ ವರ್ಷ ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಮೂಲಗಳಿಂದ ಸರ್ಕಾರಕ್ಕೆ ₹7 ಸಾವಿರ ಕೋಟಿ ಹಣ ನೀಡಿದ್ದಾರೆ.
ಸಂಘಟಿತ ಹೋರಾಟದ ಫಲವಾಗಿ ಯಶಸ್ಸು ದೊರೆತ್ತಿದ್ದು, ಕೆಜಿಐಡಿ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಏಪ್ರಿಲ್ ನಂತರ ನೌಕರ ಕುಟುಂಬದ 24 ಲಕ್ಷ ಮಂದಿ ನಗದು ರಹಿತ ಆರೋಗ್ಯ ಸೇವೆ ಪಡೆಯಲಿದ್ದಾರೆ. ಕೇಂದ್ರ ಸರ್ಕಾರಿ ನೌಕರರ ಮಾದರಿ ವೇತನ ಮತ್ತು ಎನ್‌ಪಿಎಸ್ ರದ್ಧತಿಗೆ ಹೋರಾಟ ಮಾಡಲಾಗುವುದು ಎಂದರು.

ರಾಜ್ಯ ಸಂಘವೂ ನೌಕರರ ಬೇಡಿಕೆಗಾಗಿ ಹೋರಾಟ ಮಾಡುವುದರ ಜತೆಗೆ ಬಹುಮುಖಿ ಸಮಾಜ ಸೇವೆಯಲ್ಲಿ ತೊಡಗಿದೆ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು, ತಹಶಿಲ್ದಾರ್ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೊಸೇಫ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ರಾಜ್ಯ ಸಂಘದ ಪ್ರದಾನ ಕಾರ್ಯದರ್ಶಿ ಜಗದೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಶಿವಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಮಯ್ಯ, ಪಿಡಿಒ
ಸಂಘದ ಅಧ್ಯಕ್ಷ ಚಂದ್ರಹಾಸ್, ವೈದ್ಯಾಧಿಕಾರಿ ಗಣೇಶ್ ಬಾಬು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT