ಜೂಜಾಟ ಅಡ್ಡೆ ಮೇಲೆ ದಾಳಿ: ₹ 1.1 ಲಕ್ಷ ವಶ
ತುಮಕೂರು: ನಗರದ ಚಿಕ್ಕಪೇಟೆಯ ಕವಿತಾ ಮೆಟಲ್ ಅಂಗಡಿ ಗೋದಾಮಿನ ಹಿಂಭಾಗದಲ್ಲಿನ ಜೂಜಾಟ ಆಡ್ಡೆ ಮೇಲೆ ಮಂಗಳವಾರ ರಾತ್ರಿ ಪೊಲೀಸರು ದಾಳಿ ನಡೆಸಿ ₹ 1.1 ಲಕ್ಷ ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ್ ಮತ್ತು ಇತರ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡಿವೈಎಸ್ಪಿ ತಿಪ್ಪೇಸ್ವಾಮಿ, ಇನ್ಸ್ಪೆಕ್ಟರ್ ಚಂದ್ರಶೇಖರ್, ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.