ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿ.ವಿಯಲ್ಲಿ ಕ್ರೀಡಾಕೂಟ ಆರಂಭ

Published 11 ಜೂನ್ 2024, 6:02 IST
Last Updated 11 ಜೂನ್ 2024, 6:02 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಂತರ ವಿಭಾಗಗಳ ವಾರ್ಷಿಕ ಕ್ರೀಡಾಕೂಟ ಸೋಮವಾರ ಆರಂಭವಾಯಿತು. ವಿ.ವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.

ವಿ.ವಿಯ ವಿವಿಧ ಸ್ನಾತಕೋತ್ತರ ವಿಭಾಗಗಳ ಒಟ್ಟು 19 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ. ಎರಡು ವಾರಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡಿ, ಥ್ರೋ ಬಾಲ್, ಕೊಕ್ಕೊ, ಕ್ರಿಕೆಟ್, ವಾಲಿಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಪಂದ್ಯಾವಳಿಗಳು ನಡೆಯಲಿವೆ. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡೆಗಳು ನಡೆಯಲಿವೆ.

ಮೊದಲ ದಿನ ಪುರುಷರ ಹಾಗೂ ಮಹಿಳೆಯರ ಕಬ್ಬಡಿ ಮತ್ತು ಥ್ರೋ ಬಾಲ್ ಪಂದ್ಯಗಳು ನಡೆದವು. ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕ ಎ.ಎಂ.ಮಂಜುನಾಥ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT