ಮಂಗಳವಾರ, ಅಕ್ಟೋಬರ್ 26, 2021
21 °C

ಜೆಡಿಎಸ್ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ. ಅಂಜಿನಪ್ಪ, ‘ಗಾಂಧೀಜಿ ಅಹಿಂಸೆಯ ಮೂಲಕವೇ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕು, ಆದರ್ಶ, ಹೋರಾಟ ನಮ್ಮೆಲ್ಲರಿಗೂ ಮಾದರಿ’ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ್, ‘ಗಾಂಧೀಜಿ ದೇಶಕಂಡ ಮಹಾನ್ ನಾಯಕರಾಗಿದ್ದಾರೆ. ಅವರ ಆದರ್ಶ ಗುಣಗಳನ್ನು ಯುವಜನತೆ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ‘ಮಹಾತ್ಮ ಗಾಂಧೀಜಿ ಬ್ರಿಟಿಷರ ವಿರುದ್ಧ ಹೋರಾಟಮಾಡಿ ಸ್ವಾತಂತ್ರ್ಯ ತಂದುಕೊಡದಿದ್ದರೆ ನಾವು ಸ್ವತಂತ್ರ್ಯ ಭಾರತದಲ್ಲಿ ಬದುಕುವುದು ಕಷ್ಟಕರವಾಗುತಿತ್ತು’ ಎಂದರು.

ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಲನೂರು ಅನಂತಕುಮಾರ್, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ದೇವರಾಜು, ಪಾಲಿಕೆ ಸದಸ್ಯರಾದ ಮಂಜುನಾಥ್, ಎ.ಶ್ರೀನಿವಾಸ್, ಪ್ರಚಾರ ಸಮಿತಿ ಅಧ್ಯಕ್ಷ ಚಲುವರಾಜು, ಮುಖಂಡರಾದ ಹಿರೇಹಳ್ಳಿ ಮಹೇಶ್, ಗಣೇಶ್, ಲೀಲಾವತಿ, ಜಯಶ್ರೀ, ಲಕ್ಷ್ಮಮ್ಮ, ಯಶೋದ ಇತರರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು