ಭಾನುವಾರ, ಅಕ್ಟೋಬರ್ 24, 2021
20 °C

ತಿಪಟೂರು: ಇಂದು ಗಾಂಧಿ ಸ್ಮೃತಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ಅ. 5ರಂದು ಬೆಳಿಗ್ಗೆ 11ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ನವಜೀವನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಿಡ್ಲೇಹಳ್ಳಿ ಸಂಸ್ಥಾನ ಮಠ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ನೇತೃತ್ವವಹಿಸಲಿದ್ದಾರೆ. ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರೆಸ್ ರಾಜಣ್ಣ ಅಧ್ಯಕ್ಷತೆವಹಿಸಲಿದ್ದಾರೆ. ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ವಿ. ರಾಮಸ್ವಾಮಿ, ಜಿಲ್ಲಾ ನಿರ್ದೇಶಕಿ ದಯಾಶೀಲ, ನಗರಸಭೆ ಅಧ್ಯಕ್ಷ ಪಿ.ಜೆ. ರಾಮಮೋಹನ್, ಕುಮಾರ ಆಸ್ಪತ್ರೆ ವೈದ್ಯ ಡಾ.ಶ್ರೀಧರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು