ಶುಕ್ರವಾರ, ಜನವರಿ 27, 2023
26 °C

ಗೂಳೂರು ಗಣೇಶ ವಿಸರ್ಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ತಾಲ್ಲೂಕಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾರ ಸಮ್ಮುಖದಲ್ಲಿ ಭಾನುವಾರ ವೈಭವವಾಗಿ ನಡೆಯಿತು.

ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗೂಳೂರು ಕೆರೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳ ಸಹಸ್ರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ಶನಿವಾರ ಸಂಜೆ 7ಕ್ಕೆ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾ ಮಂಗಳಾರತಿ ನೆರವೇರಿಸಲಾಯಿತು. ನಂತರ ಮಹಾಗಣಪತಿಯನ್ನು ದೇವಾಲಯದ ಗೋಪುರದಿಂದ ಹೊರತಂದು ಅಲಂಕೃತ ವಾಹನದಲ್ಲಿ ಕೂರಿಸಲಾಯಿತು. ಮಧ್ಯರಾತ್ರಿವರೆಗೂ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.

ಭಾನುವಾರ ಮಧ್ಯಾಹ್ನದಿಂದ ವಿವಿಧ ಜನಪದ ಕಲಾತಂಡಗಳು ಹಾಗೂ ಆಕರ್ಷಕ ಬಾಣ ಬಿರುಸು, ಸಿಡಿಮದ್ದಿನ ಸದ್ದಿನೊಂದಿಗೆ ಮತ್ತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಕ್ತರು, ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಗೂಳೂರು ಮಹಾಗಣಪತಿ ಭಕ್ತಮಂಡಳಿ ಅಧ್ಯಕ್ಷ ಶಿವಕುಮಾರ್ ಹಾಗೂ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು