ಶನಿವಾರ, ಸೆಪ್ಟೆಂಬರ್ 26, 2020
27 °C

ಶ್ರದ್ಧಾಭಕ್ತಿಯಿಂದ ಗಣೇಶ ಚತುರ್ಥಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ ಬಾರಿ ರಸ್ತೆ ಬದಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದ ಕಾರಣ ಮನೆ ಮತ್ತು ಕೆಲವು ದೇವಾಲಯಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲಾಗಿತ್ತು. ಸಂಜೆ ವೇಳೆಗೆ ಗಣೇಶ ವಿಸರ್ಜನೆ ಮಾಡಲಾಯಿತು.

ವಿಸರ್ಜನೆಗೆ ನಗರಸಭೆಯಿಂದ ವಾಹನ ವ್ಯವಸ್ಥೆ ಮಾಡಿದ್ದು, ಮನೆಯ ಬಳಿ ವಾಹನ ಬಂದಾಗ ಕೆಲವರು ವಿಸರ್ಜನೆ ಮಾಡಿದರೆ, ಮತ್ತೇ ಕೆಲವರು ಜಾಜಮ್ಮನ ಕಟ್ಟೆಯಲ್ಲಿ ಗಣೇಶ ವಿಸರ್ಜನೆ ಮಾಡಿದರು.

ನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, 5 ದಿನಗಳ ನಂತರ ವಿಸರ್ಜನೆ ಮಾಡಲಿದ್ದಾರೆ. ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಕೇವಲ ಪೂಜೆ ಮಾತ್ರ ಮಾಡಲಾಗುತ್ತಿದೆ.

ಅದ್ಧೂರಿಯಾಗಿ ಗಣೇಶ ವಿಸರ್ಜನೆಯನ್ನು ಮಾಡುತ್ತಿದ್ದ ಹಿಂದೂ ಪರ ಸಂಘಟನೆಗಳು ಈ ಬಾರಿ ನಗರದ ಗವಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡಿದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು