ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸಂಚು: ಸುರೇಶ್‌ ಗೌಡ ಆರೋಪ

Last Updated 22 ನವೆಂಬರ್ 2022, 12:40 IST
ಅಕ್ಷರ ಗಾತ್ರ

ತುಮಕೂರು: ‘ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ನನ್ನ ಕೊಲೆಗೆ ಸಂಚು ನಡೆಸಿದ್ದಾರೆ’ ಎಂದು ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ಗೌಡ ಆರೋಪಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮಾಂತರ ಕ್ಷೇತ್ರದ ಅರಿಯೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯೋತ್ಸವ ಹಾಗೂ ಸುರೇಶ್‌ಗೌಡ ಹುಟ್ಟುಹಬ್ಬ ಆಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊವನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಗೌರಿಶಂಕರ್ ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿ, ಬೆಂಗಳೂರಿನ ಜೈಲಿನಲ್ಲಿ ಇರುವ ಕೈದಿಗಳಿಗೆ ಸುಫಾರಿ ಕೊಟ್ಟಿದ್ದಾರೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅವಕಾಶ ನೀಡುವುದಿಲ್ಲ. ಕಾರ್ಯಕರ್ತರು ತಮ್ಮ ತಾಕತ್ತು ತೋರಿಸುತ್ತಾರೆ’ ಎಂದು ವೀರಾವೇಶದಿಂದ ಹೇಳಿದ್ದಾರೆ.

ಕಳೆದ ಒಂದು ವಾರದ ಹಿಂದೆ ನಡೆದ ಕಾರ್ಯಕ್ರಮದ ವಿಡಿಯೊವನ್ನು ತಡವಾಗಿ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವುದು ಏಕೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಅಪಪ್ರಚಾರ ನಡೆಸಿದ್ದಾರೆ. ಈ ಸಂಬಂಧ ಸಮಗ್ರ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸುವಂತೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಯುತ್ತಿದ್ದೇನೆ’ ಎಂದು ಗೌರಿಶಂಕರ್ ಸ್ಪಷ್ಟಪಡಿಸಿದರು.

‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ. ಬೇಕಿದ್ದರೆ ಸಿಬಿಐನಿಂದ ತನಿಖೆ ಮಾಡಿಸಲಿ. ಅದು ಬಿಟ್ಟು ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಗ್ರಾಮಾಂತರ ಕ್ಷೇತ್ರದಲ್ಲಿ ಕೋಮು ಗಲಭೆ ಸೃಷ್ಟಿಸಿ, ನನ್ನನ್ನೇ ಕೊಲೆ ಮಾಡಲು ಸಂಚು ರೂಪಿಸಿರಬಹುದು. ಅದಕ್ಕೆ ಮೊದಲೇ ಈ ರೀತಿ ಆರೋಪ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT