ಸರ್ಕಾರಿ ಸೌಲಭ್ಯ ಪಡೆದುಕೊಳ್ಳಿ

ಮಂಗಳವಾರ, ಮಾರ್ಚ್ 26, 2019
22 °C

ಸರ್ಕಾರಿ ಸೌಲಭ್ಯ ಪಡೆದುಕೊಳ್ಳಿ

Published:
Updated:
Prajavani

ತುಮಕೂರು: ಅಲ್ಪಸಂಖ್ಯಾತ ಮಕ್ಕಳು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗಲು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದು ಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಸಮಿತಿ ಸದಸ್ಯ ಸೈಯದ್ ಖಾದೀರ್ ಅಹಮದ್ ತಿಳಿಸಿದರು.

ನಗರದ ಸಿದ್ಧಾರ್ಥ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ವಿವಿಧ ಸರ್ಕಾರಿ ಯೋಜನೆ, ಕಾರ್ಯಕ್ರಮಗಳ ಕುರಿತು ಅಲ್ಪ ಸಂಖ್ಯಾತ ಮಹಿಳೆಯರಿಗಾಗಿ ಏರ್ಪಡಿಸಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

’ಸರ್ಕಾರಿ ಯೋಜನೆ ಹಾಗೂ ಕಾರ್ಯಕ್ರಮಗಳಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಶೇ.15ರಷ್ಟು ಮೀಸಲಾತಿ ಇದ್ದು, ಅರ್ಹರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಅವರು ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಂಬಿಕಾ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕಿ ಜಾಹ್ನವಿ ಇದ್ದರು.

ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !