ಗುಬ್ಬಿ: ತಾಲ್ಲೂಕಿನ ದೊಡ್ಡಗುಣಿ ಸಮೀಪ ದೇವರಹಟ್ಟಿ ಗೇಟ್ ಬಳಿ ಹೆದ್ದಾರಿ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಶಾಲಿನಿ (8) ಮೃತಪಟ್ಟಿದ್ದಾಳೆ.

ಕಾರಿನಲ್ಲಿದ್ದ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಲ್ಲೂಕಿನ ಕೆ.ಮತ್ತಿಘಟ್ಟ ಗ್ರಾಮದ ಮಲ್ಲಿಕಾರ್ಜುನ್ ಅವರು ಕುಟುಂಬ ಸಮೇತ ಕಾರೇಕುರ್ಚಿಯ ದೊಣೆಗಂಗಾ ಕ್ಷೇತ್ರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣವಾಗದಿರುವ ಜೊತೆಗೆ ಸೂಚನಾ ಫಲಕಗಳು ಇಲ್ಲದಿರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ಸಮೀಪದಲ್ಲಿಯೇ ಎತ್ತಿನಹೊಳೆ ನಾಲಾ ಕಾಮಗಾರಿ ನಡೆಯುತ್ತಿದ್ದರೂ, ಆ ಜಾಗದಲ್ಲಿಯೂ ಅಗತ್ಯ ತಡೆಗೋಡೆ ನಿರ್ಮಿಸಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.