ಶಿರಾ: ತಾಲ್ಲೂಕಿನ ತರೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಂದರ್ಭದಲ್ಲಿ ಸಾಂಬಾರ್ ಪಾತ್ರೆಯೊಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಎಂಟು ವರ್ಷದ ಬಾಲಕಿಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ, ಸದಸ್ಯೆ ಮಂಜು ಅವರ ಜೊತೆ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಪೋಷಕರು, ವೈದ್ಯರು ಮತ್ತು ಪೊಲೀಸರಿಂದ ಮಾಹಿತಿ ಪಡೆದಿರುವುದಾಗಿ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಅವಘಡದಲ್ಲಿ ಮಗುವಿನ ಶೇ 22ರಷ್ಟು ಚರ್ಮ ಸುಟ್ಟಿದ್ದು ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾದ ಅಗತ್ಯವಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಶಿಕ್ಷಣ ಇಲಾಖೆಗೆ, ಜಿಲ್ಲಾಧಿಕಾರಿಗೆ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಸೂಕ್ತ ಪರಿಹಾರ ಒದಗಿಸುವಂತೆ ಆಯೋಗದಿಂದ ಸೂಚನೆ ನೀಡಲಾಗುವುದು. ಮಗುವಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರ ಬಗ್ಗೆ ಅರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.