ಬುಧವಾರ, ಆಗಸ್ಟ್ 12, 2020
25 °C

ಪಾವಗಡ: ಬೆಳೆ ವಿಮೆ ಹಣ ರೈತರಿಗೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ಬ್ಯಾಂಕ್‌ಗಳಲ್ಲಿ ರೈತರು ಜಮೆ ಮಾಡಿರುವ ಬೆಳೆ ವಿಮೆ ಹಣವನ್ನು ಸರ್ಕಾರದಿಂದ ರೈತರಿಗೆ ಕೊಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದರು.

ಸೋಮವಾರ ಪಟ್ಟಣದ ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದರು.

ಪ್ರತಿವರ್ಷ ರೈತರು ಬೆಳೆ ವಿಮೆ ಕಟ್ಟುತ್ತಿದ್ದಾರೆ. ಆದರೆ, ಬ್ಯಾಂಕ್‌ನಲ್ಲಿ ಕೆಲವು ರೈತರ ಬೆಳೆ ವಿಮೆ ಪಾವತಿಯಾಗುತ್ತಿಲ್ಲ. ಬ್ಯಾಂಕ್‌ನಲ್ಲಿ ಕೇಳಿದರೆ ಸರ್ಕಾರಕ್ಕೆ ಪಾವತಿಯಾಗಿಲ್ಲದ ರೈತರ ಬೆಳೆ ವಿಮೆ ಹಣವನ್ನು ವಾಪಸ್‌ ನೀಡಲಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ಹಣ ಇನ್ನೂ ರೈತರ ಕೈ ಸೇರಿಲ್ಲ. ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಬಗ್ಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಕೃಷ್ಣರಾವ್, ವೀರಭದ್ರಪ್ಪ, ವೆಂಕಟಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು