ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈವರೆಗೆ ನಿಜಾಮುದ್ದೀನ್‌ ಭೇಟಿ ನೀಡಿದ್ದ 19 ಮಂದಿ ಪತ್ತೆ; ಉಳಿದವರ ಮಾಹಿತಿ ನೀಡಿ

ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ
Last Updated 2 ಏಪ್ರಿಲ್ 2020, 17:00 IST
ಅಕ್ಷರ ಗಾತ್ರ

ತುಮಕೂರು: ದೆಹಲಿಯ ನಿಜಾಮುದ್ದೀನ್‌ ಪ್ರದೇಶದ ತಬ್ಲೀಗ್‌ ಜಮಾತ್‌ ಕೇಂದ್ರ ಕಚೇರಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದವರು ಇದ್ದರೆ, ಅವರ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ಈ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ 19 ಜನರನ್ನು ಈವರೆಗೂ ಪತ್ತೆ ಹಚ್ಚಲಾಗಿದೆ. ಅವರಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಐಸೋಲೇಷನ್‌ ವಾರ್ಡ್‌ಗಳಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಚ್‌ 8ರಿಂದ 20ರ ವರೆಗೆ ನಡೆದ ಸಭೆಯಲ್ಲಿ ಜಿಲ್ಲೆಯಿಂದ ಇನ್ನೂ ಹೆಚ್ಚಿನ ಜನರು ಪಾಲ್ಗೊಂಡಿರುವ ಸಾಧ್ಯತೆ ಇದೆ. ಹಾಗಾಗಿ ಅವರ ಮಾಹಿತಿಯನ್ನು ಜಿಲ್ಲಾಡಳಿತದ ಸಹಾಯವಾಣಿಯೊಂದಿಗೆ (0816-2252936) ಹಂಚಿಕೊಳ್ಳಿ ಎಂದಿದ್ದಾರೆ.

12 ವರದಿ ಬರಬೇಕಿದೆ:ಗುರುವಾರಕ್ಕೆ ಕೊನೆಗೊಂಡಂತೆ ಜಿಲ್ಲೆಯಲ್ಲಿನ 132 ಜನರ ಗಂಟಲು ದ್ರವವನ್ನುಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ ಇನ್ನೂ 12 ಜನರ ವರದಿ ಬರಬೇಕಿದೆ. ಈಗಾಗಲೇ ಪರೀಕ್ಷಿಸಿದ 115 ಜನರಲ್ಲಿ ಸೋಂಕು ಕಂಡುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT