ಚಿಕ್ಕನಾಯಕನಹಳ್ಳಿ: ‘ಪಟ್ಟಣ ಹಾಗೂ ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿ, ಗಂಭೀರ ಸ್ಥಿತಿಗೆ ಬಂದಾಗ ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಿ’ ಎಂದು ತಹಶೀಲ್ದಾರ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕೋವಿಡ್- 19 ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗಾಗಿಯೇ 50 ಹಾಸಿಗೆಗಳನ್ನು ಮೀಸಲಿಡಬೇಕು ಹಾಗೂ ಆಮ್ಲಜನಕದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ತೇಜಸ್ವಿನಿ ಮಾತನಾಡಿ, ತಾಲ್ಲೂಕಿನಲ್ಲಿ ಈವರೆಗೆ 118 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈಗಾಗಲೇ 75 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 40 ಕಂಟೈನ್ಮೆಂಟ್ ಜೋನ್ ಮಾಡಿದ್ದು ಅದರಲ್ಲಿ 17 ಅಟೆಂಡಮ್ ಕಂಟೈನ್ಮೆಂಟ್ ಜೋನ್ಗಳಿವೆ. ಅಲ್ಲಿ ಒಟ್ಟು 79 ರೋಗಿಗಳಿದ್ದಾರೆ ಎಂದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅಥಿಕ್ ಪಾಷ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಕುಮಾರಸ್ವಾಮಿ, ಸರ್ಕಲ್ ಇನ್ಸ್ಪೆಕ್ಟರ್ ವೀಣಾ, ಸಬ್ಇನ್ಸ್ಪೆಕ್ಟರ್ ಶಿವಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.