ಗುರುವಾರ , ಜೂನ್ 17, 2021
22 °C
ಜಿಲ್ಲಾ ಮಾದಿಗ ದಲಿತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಒತ್ತಾಯ

ಮಾದಿಗ ಜನಾಂಗಕ್ಕೆ ಟೂಡಾ ಅಧ್ಯಕ್ಷ ಸ್ಥಾನ ನೀಡಿ: ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮಾದಿಗ ಜನಾಂಗಕ್ಕೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (ಟೂಡಾ) ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಜಿಲ್ಲಾ ಮಾದಿಗ ದಲಿತ ಸಂಘಟನೆಗಳ ಒಕ್ಕೂಟವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ನಗರದ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಸಮುದಾಯದ ಮುಖಂಡರು ಸಭೆ ನಡೆಸಿ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲೂ ಮಾದಿಗ ಜನಾಂಗ ಅಧಿಕ ಸಂಖ್ಯೆಯಲ್ಲಿದೆ. ಆದ ಕಾರಣ ಸಮುದಾಯದ ಜಿಲ್ಲಾ ಮುಖಂಡ ರಾಮಚಂದ್ರಪ್ಪ ಅವರಿಗೆ ಟೂಡಾ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ರಾಮಚಂದ್ರಪ್ಪ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ, ಸ್ಲಂ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.   ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಸಮುದಾಯದ ಮತಗಳನ್ನು ಬಿಜೆಪಿಗೆ ಸೆಳೆಯುವಲ್ಲಿ ಶ್ರಮಿಸಿದ್ದಾರೆ.

ಮಾದಿಗ ಸಮುದಾಯಕ್ಕೆ ರಾಜ್ಯದ ಯಾವುದೇ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಗಳನ್ನು ನೀಡಿಲ್ಲ. ಆದ್ದರಿಂದ ರಾಮಚಂದ್ರಪ್ಪ ಅವರನ್ನು ಟೂಡಾಕ್ಕೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮಾದಿಗ ಸಂಘಟನೆ ಒಕ್ಕೂಟದ ಅಧ್ಯಕ್ಷ ಹನುಮಂತರಾಜು, ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಎಚ್.ಬಿ.ರಾಜೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ, ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಟಿ.ಎನ್.ಮಧು, ತುಮಕೂರು ತಾಲ್ಲೂಕು ಅಧ್ಯಕ್ಷ ಸುನೀಲ್, ದಲಿತ ಸಂರಕ್ಷಣಾ ವೇದಿಕೆ ಅಧ್ಯಕ್ಷ ಮಹೇಂದ್ರಕುಮಾರ್, ಗುಬ್ಬಿ ತಾಲ್ಲೂಕು ಸಂಚಾಲಕ ಸುರೇಶ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.