ಕೊರಟಗೆರೆ: ತಾಲ್ಲೂಕಿನಲ್ಲಿ ಈಗಾಗಲೇ ವಾಡಿಕೆ ಮಳೆ ಅತ್ಯತ್ತಮವಾಗಿದ್ದು, ರೈತರು ಉಳುಮೆ ಕಾರ್ಯದಲ್ಲಿ ತೊಡಗಿದ್ದಾರೆ. ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಆರ್.ರುದ್ರಪ್ಪ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 637.5 ಮಿ.ಮೀ ವಾಡಿಕೆ ಮಳೆಯಾಗಿದ್ದು, ಮೇ 30ರ ವರೆಗಿನ ವಾಡಿಕೆ ಮಳೆ 134 ಮಿ.ಮಿ ಮಳೆ. ಪ್ರಸಕ್ತ ವರ್ಷದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರು ಕೃಷಿ ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಸಕಾಲದಲ್ಲಿ ಪಡೆದುಕೊಂಡು ತಮ್ಮ ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ ಪಡೆಯಬಹುದಾಗಿದೆ.

ತಾಲ್ಲೂಕಿನಲ್ಲಿ ಮುಂಗಾರು ಕೃಷಿ ಬೆಳೆಗಳ ಒಟ್ಟು ವಿಸ್ತೀರ್ಣ 32,750 ಹೆಕ್ಟೇರ್ ಗುರಿ ಹೊಂದಿದ್ದು, ಬಿತ್ತನೆಗೆ ಭೂಮಿ ಸಿದ್ಧತೆ ನಡೆದಿದೆ. ಕೆಲವೆಡೆ ಬಿತ್ತನೆ ಕೂಡ ಪ್ರಾರಂಭಿಸಲಾಗಿದೆ. ಕೃಷಿ ಇಲಾಖೆ ತಾಲ್ಲೂಕು ವ್ಯಾಪ್ತಿಯ ನಾಲ್ಕು ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ಅಲಸಂದೆ, ತೊಗರಿ ಹಾಗೂ ಶೇಂಗಾ ಪ್ರಮಾಣಿತ ಬಿತ್ತನೆ ಬೀಜಗಳ 274.46 ಕ್ವಿಂಟಲ್ ದಾಸ್ತಾನು ಇದೆ. ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ. ಸದ್ಯಕ್ಕೆ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ತಾಲ್ಲೂಕು ವ್ಯಾಪ್ತಿಯಲ್ಲಿರುವ ರಸಗೊಬ್ಬರ ಮಳಿಗೆಗಳು ಹಾಗೂ ಫ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ ರಸಗೊಬ್ಬರ ದಾಸ್ತಾನು ಇರಿಸಲಾಗಿದೆ. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಮತ್ತು ಬೆಳಗಳ ಬಗ್ಗೆ ತಾಂತ್ರಿಕ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.