ಶನಿವಾರ, ಮೇ 15, 2021
24 °C

ಶಿರಾ: ಗೋಪಾಲದೇವರಹಳ್ಳಿ: ಶೇ 90.54 ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ತಾಲ್ಲೂಕಿನ ಗೋಪಾಲ ದೇವರಹಳ್ಳಿ ಗ್ರಾಮ ಪಂಚಾಯಿತಿಗೆ ಸೋಮವಾರ ನಡೆದ ಉಪ ಚುನಾವಣೆ ಶಾಂತಿಯುತವಾಗಿದ್ದು, ಶೇ 90.54ರಷ್ಟು ಮತದಾನವಾಗಿದೆ.

ನೀರಾವರಿ ಯೋಜನೆಯ ಜಾರಿಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಿಷ್ಕರಿಸಿದ್ದ ಹಿನ್ನೆಲೆಯಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ.

ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಸ್ಯಾನಿಟೇಜ್‌ ಮಾಡಿಕೊಂಡ ನಂತರ ಮತ ಚಲಾಯಿಸಲು ಮತಗಟ್ಟೆಗೆ ಬಿಡಲಾಗುತ್ತಿತ್ತು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲಾಗಿತ್ತು.

ಗೋಪಾಲದೇವರಹಳ್ಳಿ ಗ್ರಾಮ ಪಂಚಾಯಿತಿಯ 9 ಕ್ಷೇತ್ರಗಳ 16 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಅದರಲ್ಲಿ ಓಬಳಿಹಳ್ಳಿಯಲ್ಲಿ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿರುವುದರಿಂದ 15 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 45 ಮಂದಿ ಕಣದಲ್ಲಿದ್ದಾರೆ. 

ಮತ ಎಣಿಕೆ ಮಾರ್ಚ್‌ 31ರಂದು ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು