ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಕ್ರೀಡೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಸಾಧನೆ

Published 11 ಆಗಸ್ಟ್ 2023, 14:21 IST
Last Updated 11 ಆಗಸ್ಟ್ 2023, 14:21 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಮಕೂರು ವಿ.ವಿ. ಕ್ರೀಡಾಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಪ್ರಸಕ್ತ ವರ್ಷ ಸಿದ್ಧಗಂಗಾ ಮಠದಲ್ಲಿ ನಡೆದ ಮಹಿಳೆಯರ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ, ತುರುವೇಕೆರೆಯಲ್ಲಿ ನಡೆದ ಮಹಿಳೆಯರ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ, ತುಮಕೂರಿನಲ್ಲಿ ನಡೆದ ಮಹಿಳೆಯರ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ, ತಿಪಟೂರಿನಲ್ಲಿ ನಡೆದ ಮಹಿಳಾ ಅಥ್ಲೆಟಿಕ್‌ನಲ್ಲಿ ಪ್ರಥಮ, ಕುಣಿಗಲ್‌ನಲ್ಲಿ ನಡೆದ ಮಹಿಳಾ ಕೊಕ್ಕೊ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.

2004ರಿಂದಲೂ ತುಮಕೂರು ವಿವಿಯ ಕ್ರೀಡಾ ಚಟುಚಟಿಕೆಯಲ್ಲಿ ಯಾವ ಕಾಲೇಜು ಮಾಡದ ಸಾಧನೆಯನ್ನು ಕುಣಿಗಲ್ ಕಾಲೇಜು ವಿದ್ಯಾರ್ಥಿಗಳು ಮಾಡಿದ್ದಾರೆ. ಪುರುಷರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಸತತವಾಗಿ 7ನೇ ಬಾರಿ ಚಾಂಪಿಯನ್ ಶಿಪ್‌ ಪಡೆದಿದ್ದಾರೆ ಎಂದು ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ರವೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT