ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕಾರ್ಮಿಕರ ಬೀದಿಗೆ ತಳ್ಳುತ್ತಿರುವ ಸರ್ಕಾರ

ಕಾರ್ಮಿಕ ಅಧಿಕಾರಿ ಕಚೇರಿ ಮುಂದೆ ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರ ಪ್ರತಿಭಟನೆ
Last Updated 5 ಸೆಪ್ಟೆಂಬರ್ 2020, 4:57 IST
ಅಕ್ಷರ ಗಾತ್ರ

ತುಮಕೂರು: ಕಾರ್ಮಿಕರ ವಿಚಾರದಲ್ಲಿ ಕಾನೂನುಬಾಹಿರವಾಗಿ ಆಡಳಿತ ಮಂಡಳಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ, ‘ಕೊರೊನಾ ದುರ್ಲಾಭ ಪಡೆದು ಸರ್ಕಾರ ಕಾರ್ಮಿಕರನ್ನು ಬೀದಿಗೆ ತಳ್ಳುತ್ತಿದೆ. ಕಾರ್ಮಿಕರ ಕುಟುಂಬಗಳೊಂದಿಗೆ ಚಲ್ಲಾಟವಾಡುತ್ತಿದೆ’ ಎಂದು ಆರೋಪಿಸಿದರು.

ಕಾರ್ಮಿಕರು ಸಂಕಷ್ಟದಲ್ಲಿ ನರಳುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಮಾಲೀಕರು ಕಾರ್ಮಿಕ ಕಾನೂನು ಉಲ್ಲಂಘಿಸುತ್ತಿದ್ದಾರೆ. ಯಾರೂ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ‘ಸಂಘದಲ್ಲಿರುವ ಹಿರಿಯ ಕಾರ್ಮಿಕರನ್ನು ಹೊರಗಿಟ್ಟು ಗುತ್ತಿಗೆ, ಟ್ರೈನಿಗಳಿಂದ ಕಂಪನಿ ಉತ್ಪಾದನೆಯಲ್ಲಿ ತೊಡಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ’ ಎಂದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಆಡಳಿತ ಮಂಡಳಿಯ ಸಂಕಷ್ಟವನ್ನು ಹಂಚಿಕೊಳ್ಳಲು ಕಾರ್ಮಿಕ ಸಂಘ ತಯಾರಿ ಇತ್ತು. ಮಾತುಕತೆ ನಡೆಸಲು ಸಂಘವು ಆಡಳಿತ ಮಂಡಳಿಯಲ್ಲಿ ಹಲವು ಬಾರಿ ಕೋರಿತ್ತು. ಆದರೆ ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.

ಮುಖಂಡರಾದ ಲಿಂಗೇಶ್, ಗಿರೀಶ್, ಮಂಜುನಾಥ್, ಸಂತೋಷ, ಶ್ರೀಕಾಂತ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT