ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಯೋಜನೆ: ಮಾಹಿತಿ ಸಂಗ್ರಹ

Last Updated 14 ಮಾರ್ಚ್ 2023, 14:39 IST
ಅಕ್ಷರ ಗಾತ್ರ

ತುಮಕೂರು: ಅಮೃತ ಯೋಜನೆಯಡಿ ಆಯ್ಕೆಯಾಗಿರುವ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯ ಜನರಿಂದ ಸೌಲಭ್ಯ ಬಳಕೆ ಕುರಿತು ಮಾಹಿತಿ ಸಂಗ್ರಹ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ವಿದ್ಯೋದಯ ಕಾನೂನು ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ, ‘ಸರ್ಕಾರದ ಸೌಲಭ್ಯಗಳನ್ನು ಜನರು ಯಾವ ರೀತಿ ಪಡೆದುಕೊಂಡಿದ್ದಾರೆ. ಕಾನೂನಿನ ಅರಿವು ಯಾವ ಮಟ್ಟದಲ್ಲಿ ಇದೆ ಎಂಬುದನ್ನು ಅರಿಯಲು ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಉತ್ತಮ ಕಾರ್ಯವಾಗಿದೆ’ ಎಂದು ಹೇಳಿದರು.

ಗ್ರಾಮೀಣ ಜನರ ಕಷ್ಟಗಳನ್ನು ಅರಿಯಲು ಹಾಗೂ ಕಾನೂನು ಅರಿವು ಮೂಡಿಸಲು ಈ ಕೆಲಸ ಸಹಕಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನರಸಿಂಹಮೂರ್ತಿ, ಪಿಡಿಒ ಮೋಹನ್, ವಕೀಲ ಕಿರಣ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ವಿ.ಕಿಶೋರ್, ರೂಪ, ಪುಷ್ಪ, ಡಾ.ಮುದ್ದುರಾಜು ಉಪಸ್ಥಿತರಿದ್ದರು.

ಮೈದಾಳ, ಮಾದಗೊಂಡನಹಳ್ಳಿ, ಕೊಂಡನಾಯಕನಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮೂಡಿಸಲಾಯಿತು. ಸರ್ಕಾರದ ಸೌಲಭ್ಯಗಳ ಕುರಿತು ಸಮೀಕ್ಷೆ ಮಾಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT