ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಪಿಎಸ್‌ ಜಾರಿಗೆ ಸರ್ಕಾರ ಬದ್ಧ: ಪುಟ್ಟಣ್ಣ

Published 10 ಮಾರ್ಚ್ 2024, 4:36 IST
Last Updated 10 ಮಾರ್ಚ್ 2024, 4:36 IST
ಅಕ್ಷರ ಗಾತ್ರ

ತುಮಕೂರು: ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿದೆ. ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯ ಮೊದಲ ಭಾಗವಾಗಿ ಸುಮಾರು 13 ಸಾವಿರಕ್ಕೂ ಅಧಿಕ ನೌಕರರನ್ನು ಎನ್‌ಪಿಎಸ್‌ನಿಂದ ಒಪಿಎಸ್‍ಗೆ ವರ್ಗಾಯಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರರಿಗೂ ಈ ಸೌಲಭ್ಯ ಸಿಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.

ನಗರದಲ್ಲಿ ಶನಿವಾರ ಡಿ.ಟಿ.ಶ್ರೀನಿವಾಸ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.

‘ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದಿದ್ದಾರೆ. ಒಂದು ಶಾಲೆಯ ಆಡಳಿತ ಮಂಡಳಿಯವರಾಗಿ ಎಲ್ಲ ಸಮಸ್ಯೆಗಳನ್ನು ಅರಿತಿದ್ದಾರೆ. ಅವರು ಗೆಲ್ಲುವುದರಿಂದ ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗೆಹರಿಸಲು ನನಗೊಬ್ಬ ಹೋರಾಟಗಾರ ಸಿಕ್ಕಂತಾಗುತ್ತದೆ’ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌, ‘ಕಳೆದ 25 ವರ್ಷಗಳಿಂದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡುತ್ತಿದ್ದೇವೆ. ಒಪಿಎಸ್ ಜಾರಿ, ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆ, ಖಾಲಿ ಹುದ್ದೆಗಳ ಭರ್ತಿ, ಅನುದಾನಿತ ಶಾಲೆಗಳ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಿದೆ’ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಕೆ.ಎಸ್.ಕಿರಣ್‍ ಕುಮಾರ್, ಎಸ್‌.ರಫೀಕ್‌ ಅಹ್ಮದ್‌, ಪೂರ್ಣಿಮಾ ಶ್ರೀನಿವಾಸ್, ಷಣ್ಮುಖಪ್ಪ, ಇಕ್ಬಾಲ್ ಅಹ್ಮದ್‌, ಟಿ.ಎಸ್‌.ನಿರಂಜನ್‌, ಮರಿಚನ್ನಮ್ಮ, ಚಿಕ್ಕಣ್ಣನಹಟ್ಟಿ ಕ್ಷೇತ್ರದ ಧರ್ಮದರ್ಶಿ ಪಾಪಣ್ಣ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT