ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್: ಮಳೆಗೆ ಕುಸಿದ ಶಾಲೆಯ ಪಡಸಾಲೆ ದಿಂಡು

Published : 6 ಆಗಸ್ಟ್ 2024, 13:48 IST
Last Updated : 6 ಆಗಸ್ಟ್ 2024, 13:48 IST
ಫಾಲೋ ಮಾಡಿ
Comments

ಕುಣಿಗಲ್: ತಾಲ್ಲೂಕಿನಲ್ಲಿ ಮಂಗಳವಾರ ಬಿದ್ದ ಮಳೆಗೆ ಸಿದ್ಧಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಡಸಾಲೆಯ ದಿಂಡು (ಕಂಬ) ಕುಸಿದಿದ್ದು, ಮಕ್ಕಳು ಮತ್ತು ಶಿಕ್ಷಕರು ಆತಂಕಗೊಂಡು ಶಾಲೆಯಿಂದ ಹೊರಬಂದಿದ್ದಾರೆ.

ಅಂಗನವಾಡಿ ಕೇಂದ್ರ ಮತ್ತು ಶಾಲೆಯ ಅವ್ಯವಸ್ಥೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತಯ. ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ಪರ್ಯಾಯ ವ್ಯವಸ್ಥೆಗೆ ಸೂಚನೆ ನೀಡಿದ್ದರು.

ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿದ್ದರು. ಪ್ರಾಥಮಿಕ ಶಾಲೆ ಶಿಥಿಲವಾದ ಕೊಠಡಿಯಲ್ಲಿ ಮುಂದುವರೆಸಲಾಗಿತ್ತು. ಮಂಗಳವಾರದ ಮಳೆಗೆ ಶಾಲೆ ಸೋರುತ್ತಿದ್ದು ಮಳೆ ನೀರು ನಿಂತಿದೆ. ನಂತರ ಶಾಲಾವರಣದ ದಿಂಡು ಕುಸಿದಿದೆ. ಬಿದ್ದ ಶಬ್ದಕ್ಕೆ ಗಾಬರಿಗೊಂಡ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಿಂದ ಹೊರಕ್ಕೆ ತೆರಳಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಜೈದೀಪ್, ಸದಸ್ಯ ಜಬೀ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲಾ ಕೊಠಡಿ ದುರಸ್ತಿಗೆ ಕ್ರಮ ತೆಗೆದುಕೊಳ್ಳಲಾಗುವುದು, ನೂತನ ಕೊಠಡಿ ನಿರ್ಮಾಣಕ್ಕೆ ಶಾಸಕರ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT