ಗುರುವಾರ , ಜುಲೈ 7, 2022
23 °C

ನಿರಂತರ ಅಭ್ಯಾಸದಿಂದ ಉತ್ತಮ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ‘ನಿರಂತರ ಅಭ್ಯಾಸದಿಂದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪೋಷಕರು ಮನೆಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಬೇಕು’ ಎಂದು ತುಮಕೂರು ರಾಮಕೃಷ್ಣ ಮಠದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ನಗರದ ಪ್ರೆಸಿಡೆನ್ಸಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜೀವನ ಕೌಶಲ ಮಾರ್ಗದರ್ಶನ ಶಿಬಿರದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಸಮಯ ಅತ್ಯಮೂಲ್ಯವಾದುದು. ನೀವು ಇಂದು ಆಸ್ತಿ, ಹಣ ಕಳೆದುಕೊಂಡರೆ ಮತ್ತೆ ಅದನ್ನು ಪಡೆಯಬಹುದು. ಆದರೆ, ಕಳೆದು ಹೋದ ಸಮಯ ಜೀವನದಲ್ಲಿ ಮತ್ತೆ ಮರಳಿಬಾರದು. ಆದ್ದರಿಂದ ಅಭ್ಯಾಸದ ಹೊರತು ಬೇರೆ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರೆಸಿಡೆನ್ಸಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಚಿದಾನಂದ ಎಂ. ಗೌಡ ಮಾತನಾಡಿದರು.

ಪ್ರಾಂಶುಪಾಲ ಡಿ.ಕೆ. ಸುಬ್ರಹ್ಮಣ್ಯ, ಆಡಳಿತಾಧಿಕಾರಿ ಗೋಪಿನಾಥ್, ಉಪನ್ಯಾಸಕ ಸೋಮಶೇಖರ್, ದ್ವಿತೀಯ ಪಿಯು ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು