ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಹೆಸರುಕಾಳು ಖರೀದಿ ಕೇಂದ್ರ ಆರಂಭ

Published 27 ಆಗಸ್ಟ್ 2024, 4:55 IST
Last Updated 27 ಆಗಸ್ಟ್ 2024, 4:55 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ತಿಪಟೂರು ಹಾಗೂ ತುರುವೇಕೆರೆ ಸೇರಿ ಮೂರು ಕಡೆಗಳಲ್ಲಿ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಕೇಂದ್ರ ತೆರೆಯಲಾಗಿದೆ.

ಖರೀದಿ ಕೇಂದ್ರಗಳು ಆ. 29ರಿಂದ ಕಾರ್ಯಾರಂಭ ಮಾಡಲಿವೆ. ಪ್ರತಿ ಕ್ವಿಂಟಲ್ ಹೆಸರುಕಾಳಿಗೆ ₹8,682 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 2 ಕ್ವಿಂಟಲ್‍ನಂತೆ, ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್ ಖರೀದಿ ಮಿತಿ ನಿಗದಿಪಡಿಸಲಾಗಿದೆ. 90 ದಿನಗಳ ಕಾಲ ಖರೀದಿ ಮಾಡಲಾಗುತ್ತದೆ.

ಎನ್ಐಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಬೆಂಬಲ ಬೆಲೆ ಯೋಜನೆ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT