ಗುಬ್ಬಿ: ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಹಬ್ಬದಂತೆ ಆಚರಿಸಲು ಸಮುದಾಯ ನಿರ್ಧರಿಸಿದೆ ಎಂದು ಅಗ್ನಿವಂಶ ಕ್ಷತ್ರಿಯ (ತಿಗಳ) ವಿದ್ಯಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮಯ್ಯ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಗಳರು ಇತರೆ ಸಮುದಾಯಗಳಿಗಿಂತ ಭಿನ್ನ ಸಂಸ್ಕೃತಿ ಉಳ್ಳವರಾಗಿದ್ದಾರೆ. ಸಮುದಾಯದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಜಯಂತಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಯೋಗಾನಂದ ಕುಮಾರ್ ಮಾತನಾಡಿ ಜಯಂತಿಯನ್ನು ಯಶಸ್ವಿಗೊಳಿಸಲು ಸಮುದಾಯದ ಯಜಮಾನರು, ಆಣೆಕಾರರು, ಮುದ್ರೆಯವರ ಸಹಕಾರ ಪಡೆದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಂಘದ ಕಾರ್ಯದರ್ಶಿ ಜಿ.ಬಿ. ಮಲ್ಲಪ್ಪ ಮಾತನಾಡಿ, ಚಂದ್ರವಂಶ, ಸೂರ್ಯವಂಶಗಳನ್ನು ಕೂಡಿಕೊಂಡು ಬೆಳೆದಿರುವ ತಿಗಳ ಸಮುದಾಯ ಸಾಂಸ್ಕೃತಿಕವಾಗಿ ಅಪಾರ ಕೊಡುಗೆ ನೀಡಿದೆ. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಅಗ್ನಿಬನ್ನಿರಾಯ ಭಾವಚಿತ್ರವನ್ನು ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ತಂದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಉಪಾಧ್ಯಕ್ಷ ಎನ್.ಸಿ. ಶಿವಣ್ಣ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ತಿಗಳ ಸಮುದಾಯವನ್ನು ಮುನ್ನೆಲೆಗೆ ತರಲು ಸರ್ಕಾರ ನಿಗಮ ಮಂಡಳಿ ಸ್ಥಾಪಿಸಬೇಕು. ಸರ್ಕಾರವು ಸಮುದಾಯದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಗೊಳಿಸಿ ಸಾಮಾಜಿಕ ಮುನ್ನಲೆಗೆ ತರಲು ಬದ್ಧತೆ ತೋರಬೇಕು. ಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಮಂಜೇಗೌಡ, ಖಜಾಂಚಿ ಸಣ್ಣ ರಂಗಯ್ಯ, ಜಂಟಿ ಕಾರ್ಯದರ್ಶಿ ನಾಗರಾಜು, ನಿರ್ದೇಶಕರಾದ ಉಂಡೆ ರಾಮಯ್ಯ, ಲೋಕೇಶ್ ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-17-1957870015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.