ಗುಬ್ಬಿ: ಪಶ್ಚಿಮ ಏಷ್ಯಾ ಭಾಗದಲ್ಲಿ ಯುದ್ಧ ಪ್ರಾರಂಭವಾದ ನಂತರ ನಿರಂತರವಾಗಿ ಗ್ಯಾಸ್ ಬೆಲೆ ಏರಿಕೆ ಆಗುತ್ತಿರುವುದರಿಂದ ಆಟೊ ಓಡಿಸಲು ಸಾಧ್ಯವಾಗುತ್ತಿಲ್ಲ. ಸಂಬಂಧಿಸಿದ ಗ್ಯಾಸ್ ಬಂಕ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುಬ್ಬಿ ಪಟ್ಟಣದ ಆಟೊ ಚಾಲಕರು ಮತ್ತು ಮಾಲೀಕರು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.

ಗ್ಯಾಸ್ ಬಂಕ್ ಮಾಲೀಕರು ಕೆ.ಜಿ ಗ್ಯಾಸ್ಗೆ ₹30 ಹೆಚ್ಚಳ ಮಾಡಿದ್ದಾರೆ. ಗ್ಯಾಸ್ ಬಂಕ್ಗಳು ಸರ್ಕಾರದ ನಿಯಂತ್ರಣಕ್ಕೆ ಒಳಪಡದೇ ಇರುವುದರಿಂದ ಮನಸೋ ಇಚ್ಛೆ ದರ ಏರಿಸುತ್ತಿದ್ದಾರೆ. ದರ ಏರಿಕೆಯಾದಂತೆ ಬಾಡಿಗೆ ದರ ಏರಿಸಲು ಸಾಧ್ಯವಾಗುವುದಿಲ್ಲ. ದರ ಏರಿಸಿದಲ್ಲಿ ಪ್ರಯಾಣಿಕರು ಆಟೊದವರ ಮೇಲೆ ಮುಗಿಬೀಳುತ್ತಾರೆ. ಹೀಗೆ ಆದರೆ ನಾವು ಬದುಕುವುದಾದರೂ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಅಧಿಕಾರಿಗಳು ಹಾಗೂ ತಾಲ್ಲೂಕು ಆಡಳಿತ ತುರ್ತು ಕ್ರಮವಹಿಸಿ ಆಟೊದವರ ನೆರವಿಗೆ ಧಾವಿಸಬೇಕು. ಇಲ್ಲವಾದಲ್ಲಿ ಬಂಕ್ ಮುಂದೆ ಆಟೊ ನಿಲ್ಲಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಆಹಾರ ನಿರೀಕ್ಷಕಿ ವೀಣಾ ಸ್ಥಳಕ್ಕೆ ಆಗಮಿಸಿ, ಬಂಕ್ ಮಾಲೀಕರ ಜತೆ ಚರ್ಚೆ ನಡೆಸಿದರು. ಆದರೆ ಮಾಲೀಕರು ದರ ಕಡಿಮೆ ಮಾಡಲು ಒಪ್ಪಲಿಲ್ಲ. ವಿಷಯವನ್ನು ತಹಶೀಲ್ದಾರ್ ಗಮನಕ್ಕೆ ತಂದು ಬಂಕ್ ಮಾಲಿಕರಿಗೆ ನೋಟಿಸ್ ನೀಡಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-17-409676786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.