ಸಿ.ಎಸ್. ಪುರ (ಗುಬ್ಬಿ): ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡದಂತೆ ಅರಿವು ಮೂಡಿಸಲಾಗಿದೆ. ಆದರೂ ಮಾರಾಟ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಸ್ ಪುರ ಪೊಲೀಸ್ ಠಾಣೆ ಪಿಎಸ್ಐ ಧರ್ಮಾಂಜಿ ಹೇಳಿದರು.

ಸಿಎಸ್ಪುರ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಪರಿಶಿಷ್ಟರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.

ಹೋಬಳಿ ವ್ಯಾಪ್ತಿಯಲ್ಲಿ ಅಸ್ಪೃಶ್ಯತೆ ಆಚರಣೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಪರಿಶಿಷ್ಟರು ಕಾನೂನುಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

ಶಿಕ್ಷಣದಿಂದ ಮಾತ್ರ ಸಾಮಾಜಿಕ ಮುನ್ನೆಲೆಗೆ ಬರಲು ಸಾಧ್ಯವಿದೆ. ಸಮುದಾಯದವರು ಶಿಕ್ಷಣಕ್ಕೆ ಒತ್ತು ನೀಡಿ ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡಬೇಕು ಎಂದರು.

ಸಭೆಯಲ್ಲಿ ಬೆಟ್ಟಸ್ವಾಮಿ, ಶಾಂತರಾಜು, ನಾರನಹಳ್ಳಿ ಶಿವು, ಮಂಚಿಹಳ್ಳಿ ಶಿವಸ್ವಾಮಿ, ಶಿವಯ್ಯ, ವೆಂಕಟೇಶಯ್ಯ, ಚಿದಾನಂದ್, ಗಿರೀಶ್, ನಾರಾಯಣ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-17-1171973207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.