ಗುಬ್ಬಿ: ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲು ತಾಲ್ಲೂಕಿನ ವಿವಿಧಡೆ 12 ಕೊಳವೆ ಬಾವಿಗಳನ್ನು ಕೊರೆಸಲು ಜಿಲ್ಲಾ ಪಂಚಾಯಿತಿಗೆ ಅನುಮೋದನೆಗೆ ಕಳುಹಿಸಲಾಗಿತ್ತು. ಸದ್ಯ ಎರಡು ಕೊಳವೆ ಬಾವಿಗಳಿಗೆ ಅನುಮೋದನೆ ದೊರತಿದ್ದು, ಉಳಿದ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.

ತಾಲ್ಲೂಕು ಆಡಳಿತ ಸೌಧದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನ ಕೊರತೆ ಉಂಟಾಗಿರುವ ತಾಲ್ಲೂಕಿನ ಅರದಗೆರೆ ಗೊಲ್ಲರಹಟ್ಟಿ, ಕೊಂಡ್ಲಿ, ಹೊನ್ನೇನಹಳ್ಳಿ ಹಾಗೂ ದಾದುಬಾಯಿ ಪಾಳ್ಯ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮತ್ತೆ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿಗೆ ತೊಂದರೆ ಉಂಟಾದಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಕೆರೆಗಳ ಸರ್ವೆ ನಡೆಯುತ್ತಿದ್ದು, ಪೂರ್ಣಗೊಂಡ ನಂತರ ಪಂಚಾಯತ್ ರಾಜ್ ಇಲಾಖೆ ಅದರ ಸುಪರ್ದಿಗೆ ಪಡೆದು ನೋಡಿಕೊಳ್ಳುವುದು ಅವರ ಜವಾಬ್ದಾರಿ ಎಂದು ತಿಳಿಸಿದರು.

ಸಭೆಯಲ್ಲಿ ತಾ.ಪಂ. ಇಒ ರಂಗನಾಥ್, ಪ.ಪಂ.ಮುಖ್ಯಾಧಿಕಾರಿ ಮಂಜುಳಾ ದೇವಿ, ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1454778765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.