ಗುಬ್ಬಿ: ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರೆಸದೆ ಒಗ್ಗಟ್ಟಿನಿಂದ ಮುಂದುವರೆದಲ್ಲಿ ಮತದಾರರ ಋಣ ತೀರಿಸಲು ಸಾಧ್ಯ ಎಂದು ಕೇಂದ್ರ ರೈಲ್ವೆ ಖಾತೆ ಹಾಗೂ ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಳ ಸೇತುವೆ ಜನಾರ್ಪಣೆ ಹಾಗೂ ರೈಲ್ವೆ ನಿಲ್ದಾಣದ ಬಳಿ ಲಘು ರಸ್ತೆ ಮೇಲು ಸೇತುವೆ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ. ಸ್ಥಳೀಯ ಜನಪ್ರತಿನಿಧಿಗಳು ವ್ಯವಸ್ಥಿತವಾಗಿ ಸಹಕರಿಸಿದರೆ ಅಗತ್ಯ ಅನುದಾನ ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ಅಮೃತ ಭಾರತ್ ಯೋಜನೆ ಅಡಿ ಗುಬ್ಬಿ ರೈಲ್ವೆ ನಿಲ್ದಾಣವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕಳ್ಳಿಪಾಳ್ಯ ಬಳಿ ಹೆದ್ದಾರಿಗೆ ಕೆಳ ಸೇತುವೆ ನಿರ್ಮಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.

ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ರಾಜಕೀಯವನ್ನು ಚುನಾವಣೆ ಕಾಲಕ್ಕೆ ಸೀಮಿತಗೊಳಿಸಿ ಉಳಿದಂತೆ ಜನಸೇವೆ ಮಾಡಲು ಬಳಸಿಕೊಳ್ಳಬೇಕಿದೆ. ಕೇಂದ್ರ ಸಚಿವರು ಚುರುಕಿನಿಂದ ಕೆಲಸ ಮಾಡುತ್ತಿದ್ದು, ತಾಲ್ಲೂಕಿನಲ್ಲಿ ಅವರ ಅನುದಾನದಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಮಾಡಿಸಿಕೊಳ್ಳಲು ಸಿದ್ಧರಾಗೋಣ ಎಂದರು.

ಇತ್ತೀಚಿಗೆ ಕೆಲವು ಸರ್ಕಾರಿ ಬಸ್ಗಳು ಗುಬ್ಬಿ ಮತ್ತು ನಿಟ್ಟೂರು ಬಸ್ ನಿಲ್ದಾಣಕ್ಕೆ ಬರದೆ ವರ್ತುಲ ರಸ್ತೆಯಲ್ಲಿಯೇ ಸಾಗುತ್ತಿರುವ ವಿಚಾರ ಗಮನಕ್ಕೆ ಬಂದಿದ್ದು, ಸಂಬಂಧಿಸಿದವರ ಬಳಿ ಮಾತನಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮಾಜಿ ಸಂಸದ ಜಿ.ಎಸ್. ಬಸವರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಯಿಷಾ ತಾಸಿನ್, ಉಪಾಧ್ಯಕ್ಷೆ ಶ್ವೇತ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಎಸ್.ಡಿ. ದಿಲೀಪ್ ಕುಮಾರ್, ಎಚ್.ಟಿ. ಭೈರಪ್ಪ, ಬೆಟ್ಟಸ್ವಾಮಿ, ಬಿ.ಎಸ್. ನಾಗರಾಜು, ಹೊನ್ನಗಿರಿ ಗೌಡ, ಕಳ್ಳಿಪಾಳ್ಯ ಲೋಕೇಶ್, ರೈಲ್ವೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.