ಕಡಬ (ಗುಬ್ಬಿ): ಬೇಸಿಗೆ ಪ್ರಾರಂಭವಾಗಿರುವ ಸಂದರ್ಭದಲ್ಲಿಯೂ ಬೆಸ್ಕಾಂ ಅಧಿಕಾರಿಗಳು ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸದೆ ತೋಟ ಒಣಗುವ ಹಂತಕ್ಕೆ ಬಂದು ನಿಂತಿವೆ. ಅಧಿಕಾರಿಗಳಿಗೆ ಕರೆ ಮಾಡಿದರೂ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎಂದು ಗುಬ್ಬಿ ತಾಲ್ಲೂಕು ಕಡಬ ಹೋಬಳಿ ಹೊನ್ನಶೆಟ್ಟಿಹಳ್ಳಿ, ಕಡೇಕೋಡಿ, ಗೋಳೆನಹಳ್ಳಿ ಸುತ್ತಮುತ್ತಲಿನ ರೈತರು ಕಡಬ ಬೆಸ್ಕಾಂ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಸರ್ಕಾರ ಕೃಷಿ ಪಂಪ್ಸೆಟ್ಗೆ 7 ಗಂಟೆ ವಿದ್ಯುತ್ ನೀಡುವುದಾಗಿ ಹೇಳುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಒಂದೂವರೆ ಗಂಟೆಯೂ ವಿದ್ಯುತ್ ನೀಡುತ್ತಿಲ್ಲ. ತೆಂಗು, ಅಡಿಕೆ ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ವಿದ್ಯುತ್ ಅಗತ್ಯವಾಗಿದೆ. ಒಂದು ವೇಳೆ ವಿದ್ಯುತ್ ನೀಡದೇ ಇದ್ದಲ್ಲಿ ತೆಂಗು, ಅಡಿಕೆ ಬೆಳೆ ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ತೆಂಗು, ಅಡಿಕೆ ಉಳಿಯದೆ ಇದ್ದಲ್ಲಿ ರೈತರ ಬದುಕೆ ಇಲ್ಲವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ಇಲ್ಲದೆ ಹಲವು ವೇಳೆ ಕುಡಿಯುವ ನೀರಿಗೂ ಅಲೆದಾಡುವ ಪರಿಸ್ಥಿತಿಯನ್ನು ಇಲಾಖೆಯವರು ತರುತ್ತಾರೆ. ವಿದ್ಯುತ್ ಅನಿವಾರ್ಯವಾಗಿರುವ ಈ ಸಂದರ್ಭದಲ್ಲಿ ರೈತರಿಗೆ ಅಗತ್ಯ ಇರುವಷ್ಟು ವಿದ್ಯುತ್ ನೀಡದೆ ಇದ್ದಲ್ಲಿ ಬದುಕನ್ನು ಹಾಗೂ ಬೆಳೆಗಳನ್ನು ಉಳಿಸಿಕೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ರೈತರ ಪರಿಸ್ಥಿತಿ ಅರಿತು ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತರಾಗಿ ಬೆಸ್ಕಾಂ ಕಚೇರಿ ಬಳಿ ಬಂದು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಹರೀಶ್, ಪಾಂಡುರಂಗ, ಬೋರೇಗೌಡ, ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-17-2117630878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.