ಗುಬ್ಬಿ: ಹೈನುಗಾರಿಕೆಯಿಂದ ಉದ್ಯೋಗ ಸೃಷ್ಟಿಯಾಗಿ, ಆರ್ಥಿಕ ಮಟ್ಟ ಹೆಚ್ಚಲಿದೆ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ತಾ.ಪಂ ಆವರಣದಲ್ಲಿ ಸೋಮವಾರ ತುಮುಲ್ ವತಿಯಿಂದ ಆಯೋಜಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಶೇಖರಣ ಸಾಮಗ್ರಿ ವಿತರಿಸಿ ಮಾತನಾಡಿದರು.

ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲಾಗುವುದು. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ತೊಂದರೆ ಆಗಬಾರದು ಎಂದು ಆಯಾ ಗ್ರಾಮಗಳಲ್ಲಿಯೇ ಹಾಲು ಉತ್ಪಾದಕರ ಸಂಘ ಆರಂಭಿಸಲಾಗುತ್ತಿದೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಮದಲ್ಲಿ ಸಂಘ ಶುರು ಮಾಡಲಾಗುವುದು ಎಂದರು.

ಹಾಲು ಶೇಖರಣೆ, ಪರೀಕ್ಷಾ ಸಾಮಗ್ರಿ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರತಿಯೊಂದು ಸಂಘಕ್ಕೆ ಎಚ್ಎಎಲ್ ಕಾರ್ಖಾನೆಯ ಸಿಎಸ್ಆರ್ ಹಣದಿಂದ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್.ವೆಂಕಟೇಶ್ ತುಳಸಿದಾಸ್, ಮುಖಂಡರಾದ ಬಾಲಕೃಷ್ಣ, ಮಧು, ಶ್ರೀನಿವಾಸ್, ಉಂಡೆ ರಾಮಣ್ಣ, ಚಿದಾನಂದ, ಕೆ.ಎ.ಶಂಕರನಾಗ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-17-1296981421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.