ಗುಬ್ಬಿ: ಪಟ್ಟಣದಲ್ಲಿ ಪಾದಚಾರಿ ಮಾರ್ಗ ಹಾಗೂ ಚರಂಡಿ ನಿರ್ಮಿಸಲು ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕಾದ ಅಗತ್ಯವಿದೆ. ವಿಸ್ತರಣೆಗೆ ವರ್ತಕರು ಒಪ್ಪುತ್ತಿಲ್ಲ. ಸಾರ್ವಜನಿಕರು ಮತ್ತು ವರ್ತಕರ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.

‘ಪಟ್ಟಣದಲ್ಲಿ ಚರಂಡಿಗಳನ್ನು ನಿರ್ಮಿಸದೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವೈಟ್ಟಾಪಿಂಗ್ ಕಾಮಗಾರಿ’ ಬಗ್ಗೆ ಸೋಮವಾರ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗೆ ಅವರು ಪ್ರತಿಕ್ರಿಯಿಸಿದರು.

ಹೆದ್ದಾರಿ ಪ್ರಾಧಿಕಾರದ ನಿಯಮಾನುಸಾರ ಕ್ರಮ ಕೈಗೊಂಡಲ್ಲಿ ಸದ್ಯ ರಸ್ತೆ ಬದಿ ಇರುವ ಎಲ್ಲ ಅಂಗಡಿಗಳನ್ನು ಒಡೆಯ ಬೇಕಾಗುತ್ತದೆ. ವರ್ತಕರ ಜೊತೆಗೆ ಸಾರ್ವಜನಿಕರ ಅನುಕೂಲ ಗಮನದಲ್ಲಿಟ್ಟುಕೊಳ್ಳಬೇಕಿದೆ. ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿ ಬಗ್ಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿ ತುರ್ತಾಗಿ ಮುಗಿಸುವಂತೆ ಸೂಚಿಸಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಟಿಎಚ್ಒ ಬಿಂದು ಮಾಧವ, ವೈದ್ಯ ಆರ್ಯನ್, ಚೇತನ್ ಕುಮಾರ್, ದರ್ಶನ್, ರಮೇಶ್, ನರಸಿಂಹಮೂರ್ತಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-2048898210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.