ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪ್ಪೂರಿನಲ್ಲಿ ತೆಂಗು, ಅಡಿಕೆ ಮರ ಕಡಿಸಿದ್ದ ಗುಬ್ಬಿ ತಹಶೀಲ್ದಾರ್ ವರ್ಗಾವಣೆ

ತಿಪ್ಪೂರಿನಲ್ಲಿ ತೆಂಗು, ಅಡಿಕೆ ಮರಗಳನ್ನು ಕಡಿದ ಪ್ರಕರಣ; ಕಂದಾಯ ಸಚಿವರಿಗೆ ವಿವರಣೆ
Last Updated 11 ಮಾರ್ಚ್ 2020, 12:57 IST
ಅಕ್ಷರ ಗಾತ್ರ
ADVERTISEMENT
""

ತುಮಕೂರು: ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ಧಮ್ಮ ಎಂಬುವವರ ಅನುಭವದಲ್ಲಿದ್ದ ತೆಂಗು, ಅಡಿಕೆ ಮರಗಳನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ತಹಶೀಲ್ದಾರ್ ಎಂ.ಮಮತಾ ಅವರನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡಿದೆ. ಅವರಿಗೆ ಇನ್ನೂ ಸ್ಥಳವನ್ನು ತೋರಿಸಿಲ್ಲ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇವರ ಸೇವೆಯನ್ನು ಹಿಂಪಡೆಯಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ಈ ಕೂಡಲೇ ಸರ್ಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಪ್ರಕರಣದ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ಮುರಳಿಯನ್ನು ಮಂಗಳವಾರ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಮಾನತುಗೊಳಿಸಿದ್ದರು.

ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಬುಧವಾರ ಮಮತಾ ಭೇಟಿ ಮಾಡಿದ್ದಾರೆ. ಈ ವೇಳೆ ಸಚಿವರು ತಹಶೀಲ್ದಾರ್ ಅವರ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT