ಗುಬ್ಬಿ: ತಾಲ್ಲೂಕಿನಲ್ಲಿ ಸೋಮವಾರ ಸಂಜೆ ಹದವಾದ ಮಳೆ ಸುರಿದಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಮಳೆ ಜೊತೆಗೆ ಗಾಳಿಯೂ ಬೀಸಿದ್ದರಿಂದ ಅನೇಕ ಕಡೆ ಮರಗಳು ರಸ್ತೆಗೆ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಗ್ರಾಮೀಣ ಭಾಗದ ತೋಟದ ಸಾಲಿನಲ್ಲಿ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಸರಬರಾಜು ಇಲ್ಲವಾಗಿದೆ.

ಗುಬ್ಬಿ ಪಟ್ಟಣದಲ್ಲಿ ಹೆದ್ದಾರಿ ವೈಟ್ ಟಾಪಿಂಗ್ ನಡೆಯುತ್ತಿದೆ. ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳು ನೀರಿನಲ್ಲಿಯೇ ತಿರುಗಾಡುವಂತಾಗಿತ್ತು. ಪಟ್ಟಣದ ಸ್ಥಿತಿ ಕಂಡು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-17-1891160554

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.