ಗುಬ್ಬಿ: ಪರವಾನಗಿ ಪಡೆಯದೆ ಪಟ್ಟಣದ ಹೃದಯ ಭಾಗದಲ್ಲಿ ತಾಲ್ಲೂಕು ಆಡಳಿತ ಸೌಧದ ಕೂಗಳತೆ ದೂರದಲ್ಲಿ ಇದ್ದ 50 ವರ್ಷ ಹಳೆಯ ಬೃಹತ್ ಗಾತ್ರದ ಮರವನ್ನು ಕಡಿಯಲಾಗಿದೆ ಎಂದು ಆರೋಪಿಸಿ ಪಟ್ಟಣದ ಪರಿಸರ ಪ್ರೇಮಿಗಳು ಹಾಗೂ ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಮರ ಕಡಿದಿರುವ ಗುತ್ತಿಗೆದಾರ ಲಕ್ಷ್ಮಣ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಯಾವುದೇ ಅಧಿಕಾರಿಗಳು ಭಾಗಿಯಾಗಿದ್ದರೂ ಅವರನ್ನು ಅಮಾನತು ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪಟ್ಟಣದ ಆಸುಪಾಸಿನಲ್ಲಿ ಇಂತಹ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಆದರೂ ಸಂಬಂಧಿಸಿದ ಅರಣ್ಯ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮರದ ಸಮೀಪದಲ್ಲಿರುವ ಓವರ್ ಹೆಡ್ ಟ್ಯಾಂಕ್ಗೆ ಅಡಚಣೆ ಉಂಟಾಗುತ್ತಿದ್ದ ಕೊಂಬೆಗಳನ್ನು ಮಾತ್ರ ತೆರವುಗೊಳಿಸಲು ವರ್ಷದ ಹಿಂದೆ ಅನುಮತಿ ನೀಡಲಾಗಿತ್ತು. ಇದೀಗ ಯಾರ ಗಮನಕ್ಕೂ ತರದೆ ಮರ ಕಡಿಯುವ ಮೂಲಕ ಕಾನೂನು ಬಾಹಿರ ಕೃತ್ಯ ನಡೆಸಿದ್ದಾರೆ. ಕಡಿದು ಹಾಕಿರುವ ಮರ, ಮರ ಸಾಗಿಸಲು ಸಿದ್ಧವಾಗಿದ್ದ ವಾಹನ ಹಾಗೂ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಅರಣ್ಯಾಧಿಕಾರಿಗಳ ಗಮನಕ್ಕೆ ಬಾರದೆ ಮರ ಕಡಿಯಲು ಹೇಗೆ ಸಾಧ್ಯ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಅನುಮಾನ ಇದೆ. ಸ್ಥಳಕ್ಕೆ ಜಿಲ್ಲಾ ಅರಣ್ಯ ಅಧಿಕಾರಿಗಳು ಬರಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ವ್ಯವಸ್ಥಿತವಾಗಿ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ತಹಶೀಲ್ದಾರ್ ಆರತಿ ಬಿ. ಅರಣ್ಯಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ ಬಾಬು, ಬಿ ಎಸ್ ಪಂಚಾಕ್ಷರಿ, ಎಚ್.ಟಿ. ಬೈರಪ್ಪ, ವಿಜಯ್ ಕುಮಾರ್, ಯತೀಶ್, ಶಂಕರ್ ಕುಮಾರ್, ರುದ್ರೇಶ್, ಭರತ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1152513021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.