ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ದಾಖಲೆ ಇಲ್ಲದ ₹3.45 ಲಕ್ಷ ಜಪ್ತಿ

Published 8 ಏಪ್ರಿಲ್ 2024, 15:15 IST
Last Updated 8 ಏಪ್ರಿಲ್ 2024, 15:15 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಕಲ್ಲೂರು ಕ್ರಾಸ್‌ನ ಚೆಕ್‌ಪೋಸ್ಟ್‌ ಬಳಿ ಸೋಮವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹3.45 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿರುಮಲಪುರ ಗ್ರಾಮದಿಂದ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಅನಗುಂದಕ್ಕೆ ತೆರಳುತ್ತಿದ್ದ ಬೊಲೆರೊ ವಾಹನದಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡಿದಾಗ ಹಣ ಸಿಕ್ಕಿದೆ.

‘ಹಣವನ್ನು ತಾಲ್ಲೂಕು ಖಜಾನೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಎಫ್‌ಐಆರ್‌ ದಾಖಲಿಸಲಾಗುವುದು’ ಎಂದು ಸಹಾಯಕ ಚುನಾವಣಾ ಅಧಿಕಾರಿ ಜಂಬಗಿ ರೇಣುಕಪ್ರಸಾದ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT