ಗುಬ್ಬಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಇದೇ 20ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಲ್ಲಿನ ತಾಲ್ಲೂಕು ಆಡಳಿತ ಸೌಧದಲ್ಲಿ ಬಿಎಲ್ಒ ಮೇಲ್ವಿಚಾರಕರು ಮತ್ತು ಬಿಎಲ್ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಆಯೋಜಿಸಲಾಯಿತು.

ಚುನಾವಣೆ ಶಿರಸ್ತೇದಾರ್ ಗುರುಪ್ರಸಾದ್ ಮಾತನಾಡಿ, ‘ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಶೀಲನೆ ನಡೆಸಿ, ಎಲ್ಲ ಅರ್ಹರಿಗೂ ಮತದಾನದ ಹಕ್ಕು ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಬಿಎಲ್ಒ ಮತ್ತು ಬಿಎಲ್ಒ ಮೇಲ್ವಿಚಾರಕರಿಗೆ ಸಲಹೆ ನೀಡಿದರು.

ಚುನಾವಣೆಗಳು ಸುಸೂತ್ರವಾಗಿ ನಡೆಯಲು ಪಾರದರ್ಶಕ ಮತ್ತು ದೋಷಮುಕ್ತ ಚುನಾವಣಾ ಪಟ್ಟಿ ಅಗತ್ಯ. ಇದರಿಂದ ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಲು ಸಾಧ್ಯವಾಗಲಿದೆ ಎಂದರು.

ಪ್ರತಿ ಬಾರಿಯೂ ಚುನಾವಣಾ ಪಟ್ಟಿ ಸಿದ್ಧಪಡಿಸಿದಾಗ ಅನೇಕ ಲೋಪ, ದೋಷಗಳು ಕಂಡು ಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗದಂತೆ ಅಧಿಕಾರಿಗಳು ನಿಗಾವಹಿಸಿ ಪಟ್ಟಿ ತಯಾರಿಸಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಯತೀಶ್ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) 2026ರ ಅಭಿಯಾನದ ಯಶಸ್ವಿಗಾಗಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಈ ಪರಿಷ್ಕರಣೆ ಪ್ರಕ್ರಿಯೆಯು ಜೂನ್ 20ರಿಂದ ಅಕ್ಟೋಬರ್ 7ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿದರು.

ತರಬೇತಿದಾರ ಲೋಕೇಶ್ ಮಾತನಾಡಿ, ಬೀಗ ಹಾಕಿದ ಮನೆಗಳು ಅಥವಾ ಮೊದಲ ಭೇಟಿಯಲ್ಲಿ ಸಿಗದ ಮತದಾರರನ್ನು ತಲುಪಲು ಬಿಎಲ್ಒಗಳು ಕನಿಷ್ಠ 3 ಬಾರಿ ಭೇಟಿ ನೀಡಬೇಕು ಎಂದು ಹೇಳಿದರು.

ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ವಾಸುದೇವ, ಪ್ರಶಾಂತ್,ಬಿಎಲ್ಒ ಮೇಲ್ವಿಚಾರಕರು ಹಾಗೂ ಬಿಎಲ್ಒಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-17-1501864654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.