ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹ

Last Updated 14 ಡಿಸೆಂಬರ್ 2021, 5:04 IST
ಅಕ್ಷರ ಗಾತ್ರ

ತುಮಕೂರು: ತರಗತಿ ಬಹಿಷ್ಕರಿಸಿ, ಪ್ರತಿಭಟನೆಗೆ ಮುಂದಾಗಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಎಐಡಿಎಸ್‌ಒ ಆಗ್ರಹಿಸಿದೆ.

ಅತಿಥಿ ಉಪನ್ಯಾಸಕರು ತಮ್ಮ ಕೆಲಸವನ್ನು ಕಾಯಂಗೊಳಿಸುವಂತೆ ದೀರ್ಘಕಾಲದ ಬೇಡಿಕೆಯೊಂದಿಗೆ ಹೋರಾಟಕ್ಕೆ ಇಳಿದಿದ್ದಾರೆ. ಅತಿಥಿ ಉಪನ್ಯಾಸಕರು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ ಕಾಯಂ ಮಾಡಿಲ್ಲ. ನಿಗದಿತ ವೇತನ ಸಹ ಜಾರಿಯಾಗಿಲ್ಲ. ಅವರಿಗೆ ಸೇವಾ ಭದ್ರತೆ ಕಲ್ಪಿಸಬೇಕು’ ಎಂದು ಸಂಘಟನೆ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಒತ್ತಾಯಿಸಿದ್ದಾರೆ.

ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕಿಂತ 2.50 ಲಕ್ಷದಷ್ಟು ಅಧಿಕ ವಿದ್ಯಾರ್ಥಿಗಳು ಪದವಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಖಾಲಿಯಿರುವ ಶೇ 70ರಷ್ಟು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕು. 14 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಕೆಲಸ ಮಾಡುವ ಉಪನ್ಯಾಸಕರಿಗೆ ಗೌರವದ ಬದುಕಿಲ್ಲ. ಕೋವಿಡ್ ಸಮಯದಲ್ಲಿ ಸರ್ಕಾರದ ಕೆಲವು ಯೋಜನೆಗಳನ್ನು ಕಾರ್ಯಗತಗೊಳಿಸಲು ಕಾರ್ಯನಿರ್ವಹಿಸಿದ್ದಾರೆ. ಬೋಧನೆ ಜತೆಗೆ ಇತರೆ ಕಾರ್ಯಗಳಿಗೂ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT