ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿ ಗಾನೋತ್ಸವ: ನಾಳೆ ಶಿವಕುಮಾರ ಸ್ವಾಮೀಜಿಗೆ ಗುರುವಂದನೆ

Last Updated 31 ಮಾರ್ಚ್ 2023, 14:24 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 116ನೇ ಗುರುವಂದನಾ ಮಹೋತ್ಸವವು ಏ. 1ರಂದು ಮಠದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಮಠಕ್ಕೆ ಭೇಟಿ ನೀಡುವ ಭಕ್ತರ ದಾಸೋಹಕ್ಕಾಗಿ ಸಿಹಿ ಬೂಂದಿ ಸಿದ್ಧಪಡಿಸಲಾಗಿದೆ. ಮಠದ ಆವರಣದಲ್ಲಿ ಹಲವು ಬಗೆಯ ಹೂವುಗಳಿಂದ ಶಿವಲಿಂಗ ತಯಾರಿಸಲಾಗುತ್ತಿದೆ. ಗುರುವಂದನಾ ಮಹೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 5 ಗಂಟೆಗೆ ಸ್ವಾಮೀಜಿಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಸಂಜೆ 4 ಗಂಟೆಗೆ ಶಿವಕುಮಾರ ಸ್ವಾಮೀಜಿಯ ಭಾವಚಿತ್ರದ ಮೆರವಣಿಗೆ ಇರಲಿದೆ. ಸಂಜೆ 5 ಗಂಟೆಗೆ ‘ಶಿವಕುಮಾರ ಸ್ವಾಮೀಜಿ ಗಾನೋತ್ಸವ’ ಏರ್ಪಡಿಸಲಾಗಿದೆ. ಗಾಯಕ ಹಂಸಲೇಖ ನೇತೃತ್ವದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT