ಮಂಗಳವಾರ, ಸೆಪ್ಟೆಂಬರ್ 21, 2021
21 °C

ತುಮಕೂರು: ಹಡಪದ ಅಪ್ಪಣ್ಣ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ತುಮಕೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.

ಕೋವಿಡ್‌ನಿಂದಾಗಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಶ್ರೀನಿವಾಸ್ ಮಾತನಾಡಿ, ಹಡಪದ ಅಪ್ಪಣ್ಣ ಅವರ 12ನೇ ಶತಮಾನದ ವಚನ ಚಳವಳಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಪ್ರಮುಖರು. ವಿಜಯಪುರ ಜಿಲ್ಲೆಯ ತಂಗಡಗಿ ಗ್ರಾಮದ
ಅವರು ಬಸವಣ್ಣ ಅವರ ಒಡನಾಡಿಗಳಾಗಿದ್ದರು. ಅಪ್ಪಣ್ಣ ಅವರು 250ಕ್ಕೂ ಹೆಚ್ಚು ವಚನ ರಚಿಸಿದ್ದಾರೆ. ಇವರ ವಚನಗಳಲ್ಲಿ ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮ ಕಾಣಬಹುದಾಗಿದೆ. ಇವರು ಬಸವಣ್ಣ ಅವರ ಅನುಭವ ಮಂಟಪದಲ್ಲಿ ಪ್ರಧಾನರಾಗಿದ್ದರು. ಬಸವಣ್ಣನವರ ಕಾರ್ಯಗಳಲ್ಲಿ ಯಾವುದೇ ಮುಜುಗರವಾಗದಂತೆ ಕಾರ್ಯನಿರ್ವಹಿಸಿರುವುದು ಇವರ ಹೆಗ್ಗಳಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಚಿದಾನಂದಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಜಗದೀಶ್, ಪರಮೇಶ್ವರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಡಿ.ವಿ ಸುರೇಶ್‌ಕುಮಾರ್, ಬಿ.ಆರ್.ರಾಜೇಗೌಡ, ಎನ್.ರಮೇಶ್, ವಿ. ರಾಜೇಶ್, ಎಸ್.ಎನ್.ದರ್ಶನ್, ಸಿದ್ದಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.