ಗುರುವಾರ , ಜುಲೈ 29, 2021
21 °C

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ; ಸರ್ಕಾರಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಆರೋಗ್ಯದ ಆರೈಕೆಯಲ್ಲಿ ಯೋಧರಂತೆ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ₹ 12 ಸಾವಿರ ಮಾಸಿಕ ವೇತನ ನೀಡಬೇಕು. ಜತೆಗೆ ಆರೋಗ್ಯ ವಿಮೆ ವ್ಯಾಪ್ತಿಗೆ ಸೇರಿಸಬೇಕು ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಶನಿವಾರ ಒತ್ತಾಯಿಸಿದರು.

ಆಶಾ ಕಾರ್ಯಕರ್ತರ ಸಭೆ ನಡೆಸಿದ ಅವರು ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೊರೊನಾ ಕಾಲದಲ್ಲಿ ಯೋಧರಂತೆ ಪ್ರಾಣವನ್ನು ಲೆಕ್ಕಿಸದೆ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರ ಸ್ಥಿತಿ ಇಂದು ಶೋಚನೀಯವಾಗಿದೆ ಎಂದರು.

ಈಗಾಗಲೇ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ವಂದನಾ ಗುರುನಾನಿ ಜತೆ ಮಾತನಾಡಿದ್ದೇವೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ತೆಲಂಗಾಣ, ಮಹಾರಾಷ್ಟ್ರ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಿವೆ. ಅದರಂತೆ ರಾಜ್ಯ ಸರ್ಕಾರವೂ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್, ಮುಖಂಡರಾದ ರೇವಣಸಿದ್ಧಯ್ಯ, ಮಂಜುನಾಥ್, ತರುಣೇಶ್, ವಾಲೆಚಂದ್ರಯ್ಯ, ಸಿಐಟಿಯು ಸುಬ್ರಹ್ಮಣ್ಯ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು