ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನಿಸಲು ಕಾನೂನು ಅರಿವು ಅಗತ್ಯ

ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಚಾಲನೆ
Last Updated 11 ಫೆಬ್ರುವರಿ 2020, 17:31 IST
ಅಕ್ಷರ ಗಾತ್ರ

ತುಮಕೂರು: ವಾರ್ಷಿಕ ₹ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಹಾಗೂ ಹಿಂದುಳಿದ ಜಾತಿ, ವರ್ಗಗಳ ಎಲ್ಲರಿಗೂ ಉಚಿತವಾಗಿ ನ್ಯಾಯಾಂಗ ಸೇವೆಗಳನ್ನು ನೀಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಂಚಾಟೆ ಸಂಜೀವಕುಮಾರ್ ಹೇಳಿದರು.

ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ, ಔಷಧಾಲಯ, ಮಕ್ಕಳ ನಿರೀಕ್ಷಣಾ ಕೊಠಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ನ್ಯಾಯ ಸಂಯೋಗ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯ ಸಂಯೋಗ ಕಚೇರಿಯಲ್ಲಿ ಇಬ್ಬರು ಪ್ಯಾನಲ್ ವಕೀಲರು ಇರುತ್ತಾರೆ. ಅವರು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಅಗತ್ಯ ಉಚಿತ ಕಾನೂನು ಸೇವೆ ನೀಡುತ್ತಾರೆ ಎಂದರು.

ಸರ್ಕಾರದ ಯೋಜನೆ ಮತ್ತು ಪಿಂಚಣಿ, ವೇತನ ಸಿಗುವಲ್ಲಿ ನೊಂದಿರುವ ಜನರೂ ಪ್ರಕರಣಗಳನ್ನು ದಾಖಲಿಸಿ ನ್ಯಾಯ ಪಡೆದುಕೊಳ್ಳಬಹುದು. ಎಲ್ಲರಿಗೂ ನ್ಯಾಯ ದೊರಕಿಸುವುದು ಪ್ರಾಧಿಕಾರದ ಉದ್ದೇಶ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್. ಚಂದ್ರಿಕಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT