ಗುರುವಾರ , ಸೆಪ್ಟೆಂಬರ್ 29, 2022
26 °C

ಸಾಮರಸ್ಯ ಜಾಗೃತಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೋಡಿನಾಗೇನಹಳ್ಳಿಯಲ್ಲಿ ಸೋಮವಾರ ಸಾಮಾಜಿಕ ಸಾಮರಸ್ಯ ವೇದಿಕೆಯಿಂದ ಸಾಮರಸ್ಯ ಜಾಗೃತಿ ಕಾರ್ಯಕ್ರಮ
ನಡೆಯಿತು.

ಗ್ರಾಮದ ಎಲ್ಲಾ ಸಮುದಾಯದ ಮನೆಗಳಿಗೆ ತೆರಳಿ ಸಾಮರಸ್ಯ ಕುರಿತು ಜಾಗೃತಿ ಮೂಡಿಸಲಾಯಿತು.

ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ ಮಾತನಾಡಿ, ಎಲ್ಲಾ ತಾರತಮ್ಯವನ್ನು ಬದಿಗೊತ್ತಿ ಮಾನವೀಯತೆಯನ್ನು ಮೈಗೂಡಿಸಿಕೊಂಡು ಮಾನವ ಧರ್ಮ ವನ್ನು ಉದ್ಧಾರ ಮಾಡ ಬೇಕಾಗಿದೆ ಎಂದು ತಿಳಿಸಿದರು.

ಮುಖಂಡ ಶಿವಕುಮಾರ್ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್, ಜಯಮಾಲಾ, ಮಂಜುನಾಥ್, ಲಕ್ಷ್ಮೀಪತಿ, ಮುಖಂಡರಾದ ದಿವಾಕರಯ್ಯ, ಗುರುಶಾಂತಪ್ಪ, ಅ.ನ. ಲಿಂಗಪ್ಪ, ಶಿವಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.