ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕೆ.ಎನ್.ರಾಜಣ್ಣ ವಿರುದ್ಧ ಪ್ರತಿಭಟನೆ

Last Updated 2 ಜುಲೈ 2022, 9:22 IST
ಅಕ್ಷರ ಗಾತ್ರ

ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ಮಧುಗಿರಿ ಮತ್ತು ಕುಣಿಗಲ್ ನಲ್ಲಿ ಶನಿವಾರ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕುಣಿಗಲ್ ನಲ್ಲಿ ಮಾಜಿ ಸಚಿವ ಡಿ.ನಾಗರಾಜಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಣಕು ಶವಯಾತ್ರೆ ನಡೆಸಿ, ಕೆ.ಎನ್.ರಾಜಣ್ಣ ಅವರನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸುವಂತೆ ಕಾರ್ಯಕರ್ತರು ಆಗ್ರಹಿಸಿದರು.

ಮಧುಗಿರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರು ಕೆ.ಎನ್.ರಾಜಣ್ಣ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ದೇವೇಗೌಡರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT